ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದವರೆಗೆ ಜೂ.12 ರಂದು ನಡೆಯಬೇಕಿದ್ದ ಪಾದಯಾತ್ರೆಯನ್ನು ಕಾರಣಾಂತರಗಳಿಂದ ಮುಂದೂಡಿರುವುದಾಗಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ. ಪಾದಯಾತ್ರೆಯ ಮುಂದಿನ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ.