ಶಕ್ತಿ ಯೋಜನೆಗೆ ಐಡಿ ಝೆರಾಕ್ಸ್ ಸಾಕು

0

ಬೆಂಗಳೂರು: ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಭಾನುವಾರ ಚಾಲನೆ ನೀಡಿದ್ದು, ಉಚಿತ ಪ್ರಯಾಣಕ್ಕೆ ಐಡಿ ಪ್ರೂಫ್ ತೋರಿಸಬೇಕು ಎಂದು ಹೇಳಲಾಗಿತ್ತು.‌ ಆದರೆ ಒರಿಜಿನಲ್ ತೋರಿಸಬೇಕಾ ಅಥವಾ ಝೆರಾಕ್ಸ್ ಸಾಕಾ ಎಂಬ ಗೊಂದಲವಿತ್ತು. ರಾಜ್ಯದ ಕೆಲವೆಡೆ ಐಡಿ ಪ್ರೂಫ್ ವಿಚಾರದಲ್ಲಿ ಬಸ್ ನಿರ್ವಾಹಕ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಮಾತಿನ ಚಕಮಕಿಗಳೂ ನಡೆದಿದ್ದವು.‌ ಐಡಿ ಪ್ರೂಫ್‌ನ ನಕಲು ಪ್ರತಿ ತೋರಿಸಿಯೂ ಬಸ್‌ಗಳಲ್ಲಿ ಉಚಿತ ಪ್ರಯಾಣಿಸಬಹುದು ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿ ಗೊಂದಲಗಳಿಗೆ ತೆರೆ ಎಳೆದಿದೆ.

ಗುರುತಿನ ಚೀಟಿಗೆ ಸಂಬಂಧಿಸಿದಂತೆ ತಿದ್ದುಪಡಿ ಆದೇಶ ಹೊರಡಿಸಿರುವ ಸಾರಿಗೆ ಇಲಾಖೆ, ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿಯ ಝೆರಾಕ್ಸ್ ಪ್ರತಿ ಇದ್ದರೂ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೆ ಹಾರ್ಡ್ ಮತ್ತು ಸಾಫ್ಟ್ ಕಾಪಿ ಇದ್ದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿದೆ.

LEAVE A REPLY

Please enter your comment!
Please enter your name here