ನೆಲ್ಯಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ಇದರ ಆಶ್ರಯದಲ್ಲಿ ಇಚ್ಲಂಪಾಡಿ ಬೀಡು ಎಂಬಲ್ಲಿ ನವೀಕರಣಗೊಂಡ ಧರ್ಮಶ್ರೀ ಸಭಾಭವನದ ಉದ್ಘಾಟನೆ ಹಾಗೂ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಜೂ.13ರಂದು ನಡೆಯಿತು.
ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಇಚ್ಲಂಪಾಡಿ ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶುಭಕರ ಹೆಗ್ಗಡೆ ಅವರು ಅಧ್ಯಕ್ಷತೆ ವಹಿಸಿದ್ದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಎನ್., ಪುತ್ತೂರು ಭೂ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಭಾಸ್ಕರ ಗೌಡ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ನೆಲ್ಯಾಡಿ ವಲಯದ ಅಧ್ಯಕ್ಷ ಕುಶಾಲಪ್ಪ ಗೌಡ, ಇಚ್ಲಂಪಾಡಿ ಒಕ್ಕೂಟದ ಅಧ್ಯಕ್ಷ ಚೆನ್ನಪ್ಪ ಗೌಡ ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ವಿಜೇಶ್ ಜೈನ್ ಹಾಗೂ ಸಮನ್ವಯಾಧಿಕಾರಿ ಚೇತನ ಕಾರ್ಯಕ್ರಮ ನಿರೂಪಿಸಿದರು. ಜ್ಞಾನವಿಕಾಸ ಕೇಂದ್ರದ ಸದಸ್ಯೆ ನಂದಕುಮಾರಿ ಸ್ವಾಗತಿಸಿದರು. ಕೇಂದ್ರದ ಸದಸ್ಯೆ ಅಮಿತಾ ವರದಿ ವಾಚಿಸಿದರು. ಸೇವಾ ಪ್ರತಿನಿಧಿ ವೇದ ವಂದಿಸಿದರು. ಧರ್ಮಶ್ರೀ ಜ್ಞಾನ ವಿಕಾಸ ಕೇಂದ್ರದ ಸದಸ್ಯರು ಸಹಕರಿಸಿದರು. ಜಿ.ಪಂ.ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ನೆಲ್ಯಾಡಿ ಗ್ರಾ.ಪಂ.ಸದಸ್ಯ ರವಿಪ್ರಸಾದ್ ಶೆಟ್ಟಿ, ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ರುಕ್ಮಯ್ಯ ಗೌಡ ಕೊರಮೇರು, ಪ್ರಧಾನ ಕಾರ್ಯದರ್ಶಿ ಹರೀಶ್ ಶೆಟ್ಟಿ ನೇರ್ಲ, ಒಕ್ಕೂಟದ ಉಪಾಧ್ಯಕ್ಷ ತನಿಯಪ್ಪ ಮೊಂಟೆತ್ತಡ್ಕ, ಇಚ್ಲಂಪಾಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಕೇಶವ ಗೌಡ ಅಲೆಕ್ಕಿ, ಗುತ್ತಿಗೆದಾರ ಡೇವಿಡ್ ಮೊಂಟಮೆ ಮತ್ತಿತರರು ಉಪಸ್ಥಿತರಿದ್ದರು. ಬೀಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಈಶ್ವರ ಪ್ರಸಾದ ಪಿ.ವಿ.ಶಾಸ್ತ್ರಿಯವರ ನೇತ್ರತ್ವದಲ್ಲಿ ಬೆಳಿಗ್ಗೆ ಗಣಹೋಮ ನಡೆಯಿತು.