‘ಗೃಹ ಜ್ಯೋತಿ’ ಯೋಜನೆಗೆ ಜೂ.18ರಿಂದ ನೋಂದಣಿ

0

ಬೆಂಗಳೂರು:ರಾಜ್ಯ ಸರಕಾರವು ‘ಗೃಹ ಜ್ಯೋತಿ’ ಯೋಜನೆಯ ನೋಂದಣಿಯನ್ನು ಜೂ.18ರಿಂದ ಪ್ರಾರಂಭಿಸಲು ಸರ್ವ ಸಿದ್ಧವಾಗಿದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಚಿಸುವ ಫಲಾನುಭವಿಗಳು ವಿಶೇಷವಾಗಿ ಸೃಜಿಸಲಾಗಿರುವ (Custom-made) ಸೇವಾ ಸಿಂಧು ಪೋರ್ಟಲ್‌ನಲ್ಲಿ https://sevasindhugs. karnataka.gov.in/gruhajyothi ನೋಂದಾಯಿಸಬೇಕಾಗಿದೆ.
ಈ ತಂತ್ರಾಂಶವನ್ನು ಮೊಬೈಲ್ ಫೋನ್, ಕಂಪ್ಯೂಟರ್, ಲ್ಯಾಪ್‌ಟ್ಯಾಪ್‌ಗಳ ಮೂಲಕವೂ ಬಳಸಬಹುದಾಗಿದೆ. ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್‌ಖಾತೆ ಸಂಖ್ಯೆಗಳ ಮಾಹಿತಿಗಳನ್ನು (ವಿದ್ಯುತ್ ಬಿಲ್‌ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕಾಗುತ್ತದೆ.

ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ಯಾವುದೆ ವಿದ್ಯುತ್ ಕಚೇರಿಗಳಲ್ಲಿ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುಚ್ಛಕ್ತಿ ಕಚೇರಿಯನ್ನು ಸಂಪರ್ಕಿಸಬಹುದು ಅಥವಾ 24/7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಬಹುದಾಗಿದೆ.

ಗೃಹ ಜ್ಯೋತಿ ಯೋಜನೆಯು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಈ ಯೋಜನೆಯಡಿ ರಾಜ್ಯದಲ್ಲಿನ ಪ್ರತಿ ಮನೆಗೆ ಪ್ರತಿ ತಿಂಗಳಿಗೆ ಗರಿಷ್ಠ 200 ಯೂನಿಟ್‌ಗಳವರೆಗಿನ ಬಳಕೆಯ ಮಿತಿಯಲ್ಲಿ ಪ್ರತಿ ಗ್ರಾಹಕರ ಮಾಸಿಕ ಸರಾಸರಿ ಬಳಕೆಯ(ಆರ್ಥಿಕ ವರ್ಷ 2022-23ರ ಬಳಕೆಯ ಆಧಾರದನ್ವಯ) ಯೂನಿಟ್‌ಗಳ ಮೇಲೆ ಶೇ.10ರಷ್ಟು ಹೆಚ್ಚಿನ ಬಳಕೆಯ ಮಿತಿಗೆ ಅರ್ಹರಿರುತ್ತಾರೆ.

LEAVE A REPLY

Please enter your comment!
Please enter your name here