ಪುತ್ತೂರು: ಭಾರತೀಯ ಸಂಸ್ಕೃತಿಯಲ್ಲಿ ಪರಂಪರಾನುಗತವಾಗಿ ಗಿಡಮೂಲಿಕೆಯ ಉಪಚಾರವನ್ನು ನಡೆಸಿಕೊಂಡು ಬರಲಾಗುತ್ತಿದೆ. ಆದರೆ, ಆಧುನಿಕ ವೈದ್ಯ ಪದ್ಧತಿಯ ಪ್ರಭಾವ ಮತ್ತು ವಿದೇಶಿ ಸಂಸ್ಕೃತಿಯ ಪ್ರವೇಶದಿಂದಾಗಿ ಸಾಂಪ್ರದಾಯಿಕ ಔಷಧೀಯ ವ್ಯವಸ್ಥೆ ಅವನತಿಯ ಭೀತಿ ಎದುರಿಸುತ್ತಿದ್ದು, ಇದರೊಂದಿಗೆ ಸಾಂಪ್ರದಾಯಿಕವಾಗಿ ಬಳಸಲಾಗುತ್ತಿದ್ದ ಗಿಡಮೂಲಿಕೆಗಳೂ ನಶಿಸಿ ಹೋಗುತ್ತಿವೆ.ಈ ನಿಟ್ಟಿನಲ್ಲಿ ಔಷಧೀಯ ಸಸ್ಯ ಸಂಕುಲದ ಸಂರಕ್ಷಣೆಯ ಉದ್ದೇಶದ ಜೊತೆಗೆ ಸಸ್ಯಗಳ ಕುರಿತಾಗಿ ಮಾಹಿತಿ ದಾಖಲೀಕರಣ ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಈ ಆಂದೋಲನವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಹೇಳಿದರು.
ಕಾಲೇಜಿನ ಆವರಣದಲ್ಲಿ ಎಲ್ಲಾ ವಿದ್ಯಾರ್ಥಿಗಳು ಔಷಧೀಯ ಗಿಡಗಳನ್ನು ನೆಟ್ಟು, ಅವುಗಳನ್ನು ಪೋಷಿಸುವ ಹವ್ಯಾಸವನ್ನು ಇಂದಿನ ವಿದ್ಯಾರ್ಥಿಗಳಲ್ಲಿ ರೂಢಿಸಿಕೊಳ್ಳಲು ಜಾಗೃತಿ ಮೂಡಿಸಲಾಯಿತು.