ಗೃಹಲಕ್ಷ್ಮಿ ಯೋಜನೆ ಅರ್ಜಿ ಸ್ವೀಕಾರ-ನಾಲ್ಕೈದು ದಿನ ಮುಂದಕ್ಕೆ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

0

ಪುತ್ತೂರು: ನಾಳೆ ಜೂ.16 ರಿಂದ ಆರಂಭವಾಗಬೇಕಿದ್ದ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ನಾಲ್ಕೈದು ದಿನ ಮುಂದೂಡಲಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಬಹಳ ಒತ್ತಡ ಬೀಳಬಹುದು ಎಂಬ ಅಭಿಪ್ರಾಯ ಸಂಪುಟ ಸಭೆಯಲ್ಲಿ ವ್ಯಕ್ತವಾದ ಹಿನ್ನೆಲೆಯಲ್ಲಿ ಗೃಹಲಕ್ಷ್ಮೀ ಅರ್ಜಿ ಬಿಡುಗಡೆ ಕಾರ್ಯಕ್ರಮ ನಾಲೈದು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಸಚಿವೆ ಹೇಳಿದ್ದಾರೆ.

ಬಾಪೂಜಿ ಕೇಂದ್ರ, ನಾಡ ಕಚೇರಿಯಲ್ಲಿ ಕೂಡ ಅರ್ಜಿ ಸ್ವೀಕಾರಕ್ಕೆ ಅವಕಾಶವಿದೆ. ಒಂದು ಮೊಬೈಲ್ ಅಪ್ಲಿಕೇಶನ್ ಸಿದ್ಧಪಡಿಸಲಾಗುತ್ತಿದೆ. ಒಂದು ಅರ್ಜಿ ತುಂಬಲು 4ರಿಂದ ಆರು ನಿಮಿಷ ಆಗಲಿದೆ. ಹೀಗಾಗಿ ಮಹಿಳೆಯರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ತಯಾರಿಗಾಗಿ ಮುಂದಕ್ಕೆ ಹಾಕಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದು, ಇ-ಆಡಳಿತದವರು ಮೊಬೈಲ್ ಅಪ್ಲಿಕೇಶನ್‌ಗೆ ಎರಡು ದಿನ ಕೇಳಿದ್ದರು, ಬಳಿಕ, ನಾಲ್ಕು ದಿನ ಕಾಲಾವಕಾಶ ಕೇಳಿದ್ದಾರೆ. ಈ ಕುರಿತಂತೆ, ಬಾಪೂಜಿ ಕೇಂದ್ರ, ನಾಡ ಕಚೇರಿ ಸಿಬ್ಬಂದಿಗೆ ತರಬೇತಿ ಕೊಡಬೇಕಾಗುತ್ತದೆ ಎಂದು ಹೆಬ್ಬಾಳ್ಕರ್ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here