ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯತ್‌ಗಳಿಗೆ 2ನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇಂದು ಮೀಸಲಾತಿ ನಿಗದಿ

0

1993ರಿಂದ ಯಾವ ಗ್ರಾ.ಪಂಗಳಲ್ಲಿ ಯಾವ ಮೀಸಲಾತಿಯಿತ್ತು

ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷರು ಯಾರು-ಇಲ್ಲಿದೆ ಸಮಗ್ರ ಚಿತ್ರಣ

ಪುತ್ತೂರು: ಸ್ಥಳೀಯ ಸರಕಾರ ಎಂದೇ ಕರೆಯಲ್ಪಡುವ ಗ್ರಾಮ ಪಂಚಾಯತ್‌ಗಳ ಹಾಲಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರದ ಅವಧಿ ಇದೇ ಆಗಸ್ಟ್‌ಗೆ ಪೂರ್ಣಗೊಳ್ಳುತ್ತಿದ್ದು ಎರಡನೇ ಅವಧಿಗೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಮೀಸಲಾತಿ ನಿಗದಿಯಾಗಲಿದೆ. ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯತ್‌ಗಳಿಗೆ ಎರಡನೇ ಅವಧಿಗೆ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿ ಪ್ರಕ್ರಿಯೆ ಜೂ.16ರಂದು ಅಪರಾಹ್ನ 3.30ರಿಂದ ದ.ಕ ಜಿಲ್ಲಾಧಿಕಾರಿಯವರ ನೇತೃತ್ವದಲ್ಲಿ ಪುತ್ತೂರು ಪುರಭವನದಲ್ಲಿ ಗ್ರಾಮ ಪಂಚಾಯತ್ ಸದಸ್ಯರ ಸಮ್ಮುಖದಲ್ಲಿ ನಡೆಯಲಿದೆ. ಕಡಬ ತಾಲೂಕಿನ 21 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಜೂ.17 ರಂದು ಮಿಸಲಾತಿ ನಿಗದಿಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ.

ಈ ಹಿನ್ನೆಲೆಯಲ್ಲಿ 1993ರಿಂದ 2020ರ ವರೆಗೆ ಪುತ್ತೂರು ತಾಲೂಕಿನ ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಹೇಗಿತ್ತು ಮತ್ತು 2020ರಿಂದ ಗ್ರಾ.ಪಂಗಳಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವವರು ಯಾರು ಎನ್ನುವ ಸಮಗ್ರ ಮಾಹಿತಿ ಇಲ್ಲಿನೀಡಲಾಗಿದೆ.

ಅರಿಯಡ್ಕ: ಅರಿಯಡ್ಕ ಹಾಗೂ ಮಾಡ್ನೂರು ಗ್ರಾಮಗಳ ವ್ಯಾಪ್ತಿಯನ್ನು ಹೊಂದಿರುವ ಅರಿಯಡ್ಕ ಗ್ರಾ.ಪಂ.ಗೆ 1993ರಲ್ಲಿ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. 2000ದ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಾಗಿತ್ತು. 2005ರ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಪಂಗಡ, 2010ರ ಮೊದಲ ಅವಧಿಯಲ್ಲಿ ಅಧ್ಯಕ್ಷತೆಗೆ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆಗೆ, 2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2020ರ ಮೊದಲ ಅವಧಿಯಲ್ಲಿ ಪ.ಜಾತಿ ಮಹಿಳಾ ಮೀಸಲಾತಿಯಲ್ಲಿ ಸೌಮ್ಯ ಬಾಲಸುಬ್ರಹ್ಮಣ್ಯ ಅಧ್ಯಕ್ಷರಾಗಿ ಹಾಗೂ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ಸಂತೋಷ್ ಮಣಿಯಾಗಿ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಆರ್ಯಾಪು: ಕುರಿಯ ಹಾಗೂ ಆರ್ಯಾಪು ಗ್ರಾಮಗಳನ್ನು ಒಳಗೊಂಡ ಆರ್ಯಾಪು ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, 2000ದ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, 2005ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 2010ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, 2015ರಲ್ಲಿ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕೆ ಮೀಸಲಾಗಿತ್ತು. 2020ರಲ್ಲಿ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಪ.ಪಂಗಡ ಮೀಸಲಾಗಿ ಸರಸ್ವತಿ ಕೆ. ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಪೂರ್ಣಿಮಾ ರೈ ಉಪಾಧ್ಯಕ್ಷರಾಗಿ ಆಯ್ಕೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಬಜತ್ತೂರು: ಬಜತ್ತೂರು ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು. 2005ರಲ್ಲಿ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಽಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 2010ರಲ್ಲಿ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಽಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆಗೆ ಮೀಸಲಾಗಿತ್ತು. 2015ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ಅಧ್ಯಕ್ಷರಾಗಿ ಪ್ರೇಮ ಬಿ. ಹಾಗೂ ಹಿಂದುಳಿದ ವರ್ಗ ಬಿ. ಮಹಿಳಾ ಮೀಸಲಾತಿಯಲ್ಲಿ ಸ್ಮಿತಾ ಪಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬಡಗನ್ನೂರು: ಪಡುವನ್ನೂರು ಮತ್ತು ಬಡಗನ್ನೂರು ಗ್ರಾ.ಪಂಗಳನ್ನು ಹೊಂದಿರುವ ಬಡಗನ್ನೂರು ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ, ಉಪಾಧ್ಯಕ್ಷ ಸ್ಥಾನ ಪ.ಜಾತಿಗೆ ಮೀಸಲಾಗಿತ್ತು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.,ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆಗೆ ಮೀಸಲಾಗಿತ್ತು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು. 2015ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಕೆ.ಶ್ರೀಮತಿ ಅಧ್ಯಕ್ಷರಾಗಿ, ಸಾಮಾನ್ಯ ಮೀಸಲಾತಿಯಲ್ಲಿ ಎ.ಸಿ ಸಂತೋಷ್ ಆಳ್ವ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬನ್ನೂರು: ಬನ್ನೂರು, ಚಿಕ್ಕಮುಡ್ನೂರು ಹಾಗೂ ಪಡ್ನೂರು ಗ್ರಾಮಗಳನ್ನು ಹೊಂದಿರುವ ಬನ್ನೂರು ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮೀಸಲು. 2010ರಲ್ಲಿ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. 2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿದ್ದು ಜಯ ಏ. ಅಧ್ಯಕ್ಷರಾಗಿ ಹಾಗೂ ಪ.ಜಾತಿ ಮಹಿಳೆ ಮೀಸಲಾತಿಯಲ್ಲಿ ಗೀತಾ ಕೊಡಂಗೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬಲ್ನಾಡು: ಬಲ್ನಾಡು ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮೀಸಲು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. 2015ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮೀಸಲಾತಿಯಲ್ಲಿ ಇಂದಿರಾ ಎಸ್ ರೈ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಪರಮೇಶ್ವರಿ ಭಟ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಬೆಟ್ಟಂಪಾಡಿ: ಇರ್ದೆ ಹಾಗೂ ಬೆಟ್ಟಂಪಾಡಿ ಗ್ರಾಮಗಳನ್ನು ಒಳಗೊಂಡಿರುವ ಬೆಟ್ಟಂಪಾಡಿ ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಪ.ಜಾತಿ.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ. 2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮಹಿಳೆ ಮೀಸಲಾತಿಯಲ್ಲಿ ಅಧ್ಯಕ್ಷರಾಗಿ ಪವಿತ್ರ, ಸಾಮಾನ್ಯ ಮೀಸಲಾತಿಯಲ್ಲಿ ವಿನೋದ್ ಕುಮಾರ್ ರೈ ಗುತ್ತು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಹಿರೇಬಂಡಾಡಿ: ಹಿರೇಬಂಡಾಡಿ ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮೀಸಲು.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮೀಸಲು.2015ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಚಂದ್ರಾವತಿ ಅಧ್ಯಕ್ಷರಾಗಿ ಹಾಗೂ ಪ.ಪಂಗಡಕ್ಕೆ ಮೀಸಲಾತಿಯಲ್ಲಿ ಭವಾನಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕಬಕ: ಕಬಕ ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಾಗಿತ್ತು. 2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2020ರ ಮೊದಲ ಅವಽಗೆ ಸಾಮಾನ್ಯ ಮೀಸಲಾತಿಯಲ್ಲಿ ವಿನಯ ಕಲ್ಲೇಗ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮೀಸಲಾತಿಯಲ್ಲಿ ರುಕ್ಮಯ್ಯ ಗೌಡ ಪೋಳ್ಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೊಡಿಪ್ಪಾಡಿ: ಕಬಕ ಗ್ರಾ.ಪಂನಿಂದ ಪ್ರತ್ಯೇಕಗೊಂಡು 2015ರಲ್ಲಿ ಅಸ್ತಿತ್ವಕ್ಕೆ ಬಂದ ಕೊಡಿಪ್ಪಾಡಿ ಗ್ರಾ.ಪಂನಲ್ಲಿ ಪ್ರಥಮ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಪ.ಜಾತಿ ಮೀಸಲಾತಿಯಲ್ಲಿ ರೇಖಾ ಅಧ್ಯಕ್ಷರಾಗಿ ಹಾಗೂ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ಸುಮಿತ್ರ ಎಂ. ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೆದಂಬಾಡಿ: ಕೆದಂಬಾಡಿ ಮತ್ತು ಕೆಯ್ಯೂರು ಗ್ರಾಮಗಳನ್ನು ಒಳಗೊಂಡಿದ್ದ ಕೆದಂಬಾಡಿ ಗ್ರಾ.ಪಂಗೆ 1993ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ ಮೀಸಲಾಗಿತ್ತು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ.ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ.ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಯ.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. 2015ರಲ್ಲಿ ಕೆಯ್ಯೂರು ಗ್ರಾಮಕ್ಕೆ ಪ್ರತ್ಯೇಕ ಗ್ರಾಮ ಪಂಚಾಯತ್ ಅಸ್ತಿತ್ವಕ್ಕೆ ಬಂದಿದ್ದು ಕೆದಂಬಾಡಿ ಗ್ರಾ.ಪಂ.ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮೀಸಲಾತಿಯಲ್ಲಿ ಕೆ.ಬಿ.ರತನ್ ರೈ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮೀಸಲಾತಿಯಲ್ಲಿ ಭಾಸ್ಕರ ರೈ ಮಿತ್ರಂಪಾಡಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೆಯ್ಯೂರು: ಕೆದಂಬಾಡಿ ಗ್ರಾಮ ಪಂಚಾಯತ್‌ನಿಂದ ಪ್ರತ್ಯೇಕಗೊಂಡು 2015ರಲ್ಲಿ ಅಸ್ತಿತ್ವಕ್ಕೆ ಬಂದ ಕೆಯ್ಯೂರು ಗ್ರಾ.ಪಂನಲ್ಲಿ ಪ್ರಥಮ ಅಧ್ಯಕ್ಷ ಸ್ಥಾನಕ್ಕೆ ಪ.ಜಾತಿ, ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಬಿ ಮೀಸಲು ನಿಗದಿಯಾಗಿತ್ತು. 2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ಜಯಂತಿ ಭಂಡಾರಿ ಅಧ್ಯಕ್ಷರಾಗಿ ಹಾಗೂ ಪ.ಜಾತಿ ಮೀಸಲಾತಿಯಲ್ಲಿ ಗಿರಿಜಾ ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೊಳ್ತಿಗೆ: ಕೊಳ್ತಿಗೆ ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ ಮೀಸಲಾಗಿತ್ತು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾಗಿತ್ತು.2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮೀಸಲು.2020ರ ಮೊದಲ ಅವಧಿಗೆ ಸಾಮಾನ್ಯ ಮೀಸಲಾತಿಯಲ್ಲಿ ಶ್ಯಾಮಸುಂದರ ರೈ ಅಧ್ಯಕ್ಷರಾಗಿ, ಪ.ಪಂಗಡ ಮಹಿಳಾ ಮೀಸಲಾತಿಯಲ್ಲಿ ನಾಗವೇಣಿ ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕೋಡಿಂಬಾಡಿ: ಬೆಳ್ಳಿಪ್ಪಾಡಿ ಹಾಗೂ ಕೋಡಿಂಬಾಡಿ ಗ್ರಾಮಗಳನ್ನು ಹೊಂದಿರುವ ಕೋಡಿಂಬಾಡಿ ಗ್ರಾ.ಪಂನಲ್ಲಿ 1993ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.2000ದ ಮೊದಲ ಅವಧಿಯಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು.2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.2015ರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು.2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ರಾಮಚಂದ್ರ ಪೂಜಾರಿ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಉಷಾಲಕ್ಷ್ಮಣ ಪೂಜಾರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಮುಂಡೂರು: ಕೆಮ್ಮಿಂಜೆ, ಸರ್ವೆ ಹಾಗೂ ಮುಂಡೂರು ಗ್ರಾಮಗಳನ್ನು ಒಳಗೊಂಡಿರುವ ಮುಂಡೂರು ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ ಮೀಸಲಾಗಿತ್ತು.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ.2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು.2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ ಮೀಸಲು. 2015ರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಬಿ ಮಹಿಳಾ ಮೀಸಲಾತಿಯಲ್ಲಿ ಪುಷ್ಪಾ ಎನ್ ಅಧ್ಯಕ್ಷರಾಗಿ, ಪ.ಜಾತಿ ಮಹಿಳಾ ಮೀಸಲಾತಿಯಲ್ಲಿ ಪ್ರೇಮಾ ಎಸ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನರಿಮೊಗರು: ನರಿಮೊಗರು ಮತ್ತು ಶಾಂತಿಗೋಡು ಗ್ರಾಮಗಳನ್ನು ಹೊಂದಿರುವ ನರಿಮೊಗರು ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ.ಮಹಿಳೆ ಮೀಸಲು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.2015ರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.2020ರ ಮೊದಲ ಅವಧಿಗೆ ಪ.ಜಾತಿ ಮಹಿಳಾ ಮೀಸಲಾತಿಯಲ್ಲಿ ವಿದ್ಯಾ ಎ ಅಧ್ಯಕ್ಷರಾಗಿ ಹಾಗೂ ಹಿಂದುಳಿದ ವರ್ಗ ಎ. ಮೀಸಲಾತಿಯಲ್ಲಿ ಸುಧಾಕರ ಕುಲಾಲ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

34 ನೆಕ್ಕಿಲಾಡಿ: 34 ನೆಕ್ಕಿಲಾಡಿ ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಪಂಗಡ.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ. 2015ರ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಎ. ಮೀಸಲಾತಿಯಲ್ಲಿ ಪ್ರಶಾಂತ್ ಎನ್ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಸ್ವಪ್ನ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನೆಟ್ಟಣಿಗೆ ಮುಡ್ನೂರು: ನೆಟ್ಟಣಿಗೆ ಮುಡ್ನೂರು ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆ ಮೀಸಲು.2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಜಾತಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ., ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು. 2015ರ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮೀಸಲಾತಿಯಲ್ಲಿ ರಮೇಶ್ ರೈ ಎ.ಅಧ್ಯಕ್ಷರಾಗಿ, ಹಿಂದುಳಿದ ವರ್ಗ ಎ ಮಹಿಳಾ ಮೀಸಲಾತಿಯಲ್ಲಿ ಫೌಝಿಯಾ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಒಳಮೊಗ್ರು: ಒಳಮೊಗ್ರು ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ.2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಪ.ಪಂಗಡ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.,2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2015ರ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ, ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಹಿಂದುಳಿದ ವರ್ಗ ಎ. ಮೀಸಲಾತಿಯಲ್ಲಿ ತ್ರಿವೇಣಿ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಸುಂದರಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಪಾಣಾಜೆ: ಪಾಣಾಜೆ ಹಾಗೂ ನಿಡ್ಪಳ್ಳಿ ಗ್ರಾಮಗಳನ್ನು ಹೊಂದಿರುವ ಗ್ರಾ.ಪಂನ 1993ರ ಅಧ್ಯಕ್ಷ ಸ್ಥಾನ ಪ.ಪಂಗಡ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮೀಸಲು. 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ, ಉಪಾಧ್ಯಕ್ಷ ಸ್ಥಾನ ಪ.ಪಂಗಡ ಮೀಸಲು.2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲು. 2015ರಲ್ಲಿ ನಿಡ್ಪಳ್ಳಿಗೆ ಪ್ರತ್ಯೇಕ ಗ್ರಾಮ ಪಂಚಾಯತ್ ಅಸ್ತಿತ್ವಕ್ಕೆ ಬಂದಿತ್ತು. ಪಾಣಾಜೆ ಗ್ರಾ.ಪಂ.ಗೆ 2015ರಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ ಮಹಿಳೆ ಮೀಸಲಾಗಿತ್ತು.2020ರ ಮೊದಲ ಅವಧಿಗೆ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಭಾರತಿ ಭಟ್ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮೀಸಲಾತಿಯಲ್ಲಿ ಅಬೂಬಕ್ಕರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ನಿಡ್ಪಳ್ಳಿ: ಪಾಣಾಜೆ ಗ್ರಾ.ಪಂನಿಂದ ಪ್ರತ್ಯೇಕಗೊಂಡು 2015ರಲ್ಲಿ ಅಸ್ತಿತ್ವಕ್ಕೆ ಬಂದ ನಿಡ್ಪಳ್ಳಿ ಗ್ರಾ.ಪಂನಲ್ಲಿ ಪ್ರಥಮ ಅಧ್ಯಕ್ಷತೆಗೆ ಪ.ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಪ.ಪಂಗಡ ಮಹಿಳಾ ಮೀಸಲಾತಿಯಲ್ಲಿ ಗೀತಾ ಡಿ. ಅಧ್ಯಕ್ಷರಾಗಿ, ಹಿಂದುಳಿದ ವರ್ಗ ಎ ಮೀಸಲಾತಿಯಲ್ಲಿ ವೆಂಕಟ್ರಮಣ ಬೋರ್ಕರ್ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಉಪ್ಪಿನಂಗಡಿ: ಉಪ್ಪಿನಂಗಡಿ ಗ್ರಾ.ಪಂ.ಗೆ 1993ರ ಅಧ್ಯಕ್ಷ ಸ್ಥಾನ ಪ.ಜಾತಿ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ, 2000ದ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಮೀಸಲಾಗಿತ್ತು. 2005ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು. 2010ರ ಮೊದಲ ಅವಧಿಗೆ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಪ.ಜಾತಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., 2015ರಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆ ಮೀಸಲಾಗಿತ್ತು. 2020ರ ಮೊದಲ ಅವಧಿಗೆ ಸಾಮಾನ್ಯ ಮಹಿಳಾ ಮೀಸಲಾತಿಯಲ್ಲಿ ಉಷಾ ಮುಳಿಯ ಅಧ್ಯಕ್ಷರಾಗಿ ಹಾಗೂ ಸಾಮಾನ್ಯ ಮೀಸಲಾತಿಯಲ್ಲಿ ವಿನಾಯಕ ಪೈ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

ಕಡಬ ತಾಲೂಕು ಗ್ರಾಮ ಪಂಚಾಯತ್‌ಗಳು:

ಕಡಬ ತಾಲೂಕಿನ 21 ಗ್ರಾ.ಪಂ.ಗಳ ಪ್ರಸ್ತುತ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ:

ಕಡಬ:ನೂತನವಾಗಿ ರಚನೆಗೊಂಡ ಕಡಬ ತಾಲೂಕಿನ 21 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಜೂ.17 ರಂದು ಮಿಸಲಾತಿ ನಿಗದಿಯು ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಲಿದೆ. ಬೆಳಿಗ್ಗೆ 10.30 ಕ್ಕೆ ಸುಳ್ಯ ಹಾಗೂ 11.30 ಕ್ಕೆ ಕಡಬ ತಾಲೂಕಿನ ಗ್ರಾಮ ಪಂಚಾಯತ್ ಗಳ ಮಿಸಲಾತಿ ಪ್ರಕ್ರಿಯೆ ನಡೆಯಲಿದೆ.


ಕಡಬ ತಾಲೂಕಿನ 21 ಗ್ರಾ.ಪಂ.ಗಳಲ್ಲಿ ಪ್ರಸ್ತುತ ಇರುವ ಅಧ್ಯಕ್ಷ, ಉಪಾಧ್ಯಕ್ಷರ ಮಿಸಲಾತಿ ಈ ಕೆಳಗಿನಂತಿವೆ.

ಬಿಳಿನೆಲೆ: ಬಿಳಿನೆಲೆ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಮೀಸಲು.

ಕೊಯಿಲ: ಕೊಯಿಲ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮಿಸಲು.

ಆಲಂಕಾರು: ಆಲಂಕಾರು ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ., ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ನೆಲ್ಯಾಡಿ: ನೆಲ್ಯಾಡಿ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.,ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲು.

ಕೌಕ್ರಾಡಿ: ಕೌಕ್ರಾಡಿ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ರಾಮಕುಂಜ: ರಾಮಕುಂಜ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಮಹಿಳೆಗೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.

ಐತ್ತೂರು: ಐತ್ತೂರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆ,ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.

ಗೋಳಿತೊಟ್ಟು: ಗೋಳಿತೊಟ್ಟು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ. ಮಹಿಳೆಗೆ ಮೀಸಲಾಗಿತ್ತು.

ಕೊಣಾಜೆ: ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕೊಣಾಜೆ ಗ್ರಾ.ಪಂ. ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆಗೆ ಮೀಸಲಾಗಿತ್ತು.

ಮರ್ದಾಳ: ಮರ್ದಾಳ ಗ್ರಾ.ಪಂ.ನಲ್ಲಿ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿತ್ತು.

ಕುಟ್ರುಪಾಡಿ: ಕುಟ್ರುಪ್ಪಾಡಿ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ ಮಹಿಳೆಗೆ ಮೀಸಲಾಗಿತ್ತು.

ಪೆರಾಬೆ: ಪೆರಾಬೆ ಗ್ರಾ.ಪಂ. ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು.

ಬೆಳಂದೂರು: ಬೆಳಂದೂರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ, ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಮಹಿಳೆಗೆ ಮೀಸಲಾಗಿತ್ತು.

ಶಿರಾಡಿ: ಶಿರಾಡಿ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.

ಕೊಂಬಾರು: ಕೊಂಬಾರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಾಗಿತ್ತು.

ಸವಣೂರು: ಸವಣೂರು ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮೀಸಲಾಗಿತ್ತು.

ಎಡಮಂಗಲ: ಎಡಮಂಗಲ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,ಉಪಾಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮೀಸಲಾಗಿತ್ತು.

ಬಳ್ಪ: ಬಳ್ಪ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ,ಉಪಾಧ್ಯಕ್ಷತೆ ಹಿಂದುಳಿದ ವರ್ಗ ಎ ಮೀಸಲಾಗಿತ್ತು.

ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ,ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಮಹಿಳೆಗೆ ಮೀಸಲಾಗಿತ್ತು.

ಕಾಣಿಯೂರು: ಕಾಣಿಯೂರು ಗ್ರಾ,ಪಂ.ನ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.

ನೂಜಿಬಾಳ್ತಿಲ: ನೂಜಿಬಾಳ್ತಿಲ ಗ್ರಾ.ಪಂ.ನ ಅಧ್ಯಕ್ಷ ಸ್ಥಾನ ಅನುಸೂಚಿತ ಪಂಗಡ ಮಹಿಳೆ,ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮೀಸಲಾಗಿತ್ತು.

LEAVE A REPLY

Please enter your comment!
Please enter your name here