ಪುತ್ತೂರು: ನವತೇಜ ಟ್ರಸ್ಟ್ ಪುತ್ತೂರು, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ, (ಐ.ಐ.ಹೆಚ್.ಆರ್.) ಮತ್ತು ಜೆ.ಸಿ.ಐ. ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಬಪ್ಪಳಿಗೆ ಜೈನ ಭವನ ದಲ್ಲಿ ನಡೆಯುವ ಎರಡು ದಿನಗಳ ಹಲಸು ಮತ್ತು ಹಣ್ಣುಗಳ ಮೇಳಕ್ಕೆ ಜೂ 17ರಂದು ಚಾಲನೆ ನೀಡಲಾಯಿತು.
ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಂಜಯ ಕುಮಾರ್ ಸಿಂಗ್ ಹಲಸಿನ ಸಸಿ ನೆಡುವ ಮೂಲಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ಸುದಾನ ವಸತಿಯುತ ಶಾಲೆಯ ಸಂಚಾಲಕ ರೇ ವಿಜಯ ಹಾರ್ವಿನ್ ಅವರು ಸಭಾ ನೇತೃತ್ವ ವಹಿಸಿದರು. ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರೋಜೆಕ್ಟ್ ಕೋ ಆರ್ಡಿನೇಟರ್ ಡಾ. ಪಿ.ಸಿ ಪಾಟೀಲ್, ನ್ಯಾಯವಾದಿ ಫಝ್ಲುಲ್ ರಹೀಮ್, ವಲಯ ಜೇಸಿ ನಿರ್ದೇಶಕ ಅಕ್ಷತಾ ಗಿರೀಶ್ ಐತ್ತಾಳ್, ರೋಟರಿ ಕ್ಲಬ್ ಪುತ್ತೂರು ಯುವ ನಿಯೋಜಿತ ಅಧ್ಯಕ್ಷ ಪಶುಪತಿ ಶರ್ಮ ವೇದಕೆಯಲ್ಲಿ ಉಪಸ್ಥಿತರಿದ್ದರು. ಜೇಸಿಐ ಅಧ್ಯಕ್ಷ ಸುಹಾಸ್ ರೈ ಪ್ರಾಸ್ತಾವಿಕವಾಗಿ ಮಾತನಾಡಿದರು. ನಾ ಕಾರಂತ ಪೆರಾಜೆ ಕಾರ್ಯಕ್ರಮ ನಿರೂಪಿಸಿದರು.
ಹಲಸಿನ ಮೇಳದಲ್ಲಿ ಮಳಿಗೆಗಳು