ವಿಟ್ಲ: ವಿಟ್ಲ ಪೊಲೀಸ್ ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಪನಿರೀಕ್ಷಕರಾಗಿದ್ದ ಸಂದೀಪ್ ಶೆಟ್ಟಿಯವರನ್ನು ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಳಿಸಿ ಪಶ್ಚಿಮ ವಲಯ ಪೊಲೀಸ್ ಉಪ ಮಹಾನಿರೀಕ್ಷಕರು ಆದೇಶ ಹೊರಡಿಸಿದ್ದಾರೆ.
2018ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡ ಸಂದೀಪ್ ಶೆಟ್ಟಿಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರೊಬೆಷನರಿಯಾಗಿ ಕರ್ತವ್ಯ ನಿರ್ವಹಿಸಿದ್ದರು. ಆ ಬಳಿಕ 2021ರಲ್ಲಿ ವಿಟ್ಲ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡ ಅವರು ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಇದೀಗ ಅವರನ್ನು ಕಾರ್ಕಳ ನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸಂದೀಪ್ ಶೆಟ್ಟಿಯವರು ಕುಂದಾಪುರ ಗುಲ್ಪಾಡಿ ನಿವಾಸಿಯಾಗಿದ್ದಾರೆ.