ದ.ಕ. ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಅಧಿಕಾರ ಸ್ವೀಕಾರ

0

ಪುತ್ತೂರು: ದ.ಕ. ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲ್ಲೈ ಮುಹಿಲನ್ ಎಂ.ಪಿ. ಜೂ.17ರಂದು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ರವಿಕುಮಾರ್ ಎಂ.ಆರ್.ರವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ಬೆಂಗಳೂರು ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್‌ನ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದ ಇವರನ್ನು ದ.ಕ.ಜಿಲ್ಲಾಧಿಕಾರಿಯಾಗಿ ನೇಮಿಸಿ ವರ್ಗಾವಣೆಗೊಳಿಸಿ ಸರಕಾರ ಆದೇಶಿಸಿತ್ತು. ತಮಿಳುನಾಡು ಮೂಲದವರಾದ ಮುಲ್ಲೈ ಮುಹಿಲನ್‌ರವರು ದಿಂಡಿಗಲ್ ಅಣ್ಣಾ ವಿಶ್ವವಿದ್ಯಾಲಯದ ಪಿಎಸ್‌ಎನ್‌ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿನಲ್ಲಿ ಓದಿದ್ದು ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಪದವಿ ಪಡೆದಿದ್ದು 2013 ರ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದಾರೆ.

LEAVE A REPLY

Please enter your comment!
Please enter your name here