ನೆಲ್ಯಾಡಿ ಶ್ರೀರಾಮ ವಿದ್ಯಾಲಯದಲ್ಲಿ ಪ್ರವೇಶೋತ್ಸವ

0

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ ಸೂರ್ಯನಗರ ನೆಲ್ಯಾಡಿ ಇಲ್ಲಿಗೆ ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳ ಪ್ರವೇಶೋತ್ಸವ ಜೂ.16ರಂದು ನಡೆಯಿತು.


ನೂತನ ವಿದ್ಯಾರ್ಥಿಗಳು ಅಗ್ನಿಹೋತ್ರಕ್ಕೆ ಹವಿಸ್ಸು ಸಮರ್ಪಣೆಯನ್ನು ಮಾಡಿದರು. ಕಾರ್ಯಕ್ರಮದ ಅತಿಥಿಯಾಗಿದ್ದ ಶೇಖರ ಗೌಡ ಅನಿಲರವರು ಸನಾತನ ಸಂಸ್ಕೃತಿಯನ್ನು ಎತ್ತಿ ಹಿಡಿದು ಅದನ್ನು ಮುಂದುವರಿಸುವಂತಹ ಕೆಲಸವನ್ನು ಶ್ರೀರಾಮ ವಿದ್ಯಾಲಯ ಮಾಡುತ್ತಿದೆ. ಇಂತಹ ವಿದ್ಯಾಲಯದ ಉನ್ನತಿಗೆ ಸಮಾಜದ ಜನರು ಸಹಕರಿಸಬೇಕು ಎಂದು ಹೇಳಿದರು.

ಇನ್ನೋರ್ವ ಅತಿಥಿ ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷರಾದ ಡಾ. ಶ್ರೀಶ ಭಟ್‌ರವರು ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸರಕಾರಿ ಉದ್ಯೋಗದಲ್ಲಿ ಸಾಕಷ್ಟು ಅವಕಾಶವಿದೆ. ಈ ಅವಕಾಶವನ್ನು ಈ ವಿದ್ಯಾಲಯದ ವಿದ್ಯಾರ್ಥಿಗಳು ಪಡೆಯಬೇಕು. ಪ್ರಾಥಮಿಕ ಹಂತದಿಂದಲೇ ವಿದ್ಯಾರ್ಥಿಗಳು ಗಣಿತದಲ್ಲಿ ಹೆಚ್ಚಿನ ಆಸಕ್ತಿಯನ್ನು ವಹಿಸಬೇಕು. ಮಾದಕ ವ್ಯಸನಗಳಿಗೆ ಒಳಗಾಗಬಾರದೆಂದು ಹೇಳಿದರು. ನಿವೃತ್ತ ಅಧ್ಯಾಪಕ ಗಣೇಶ ಐತಾಳ್‌ರವರು ಮಾತನಾಡಿ, ಸಂಸ್ಕಾರ ಪಡೆದಂತಹ ವ್ಯಕ್ತಿಯು ದಾರಿ ತಪ್ಪಲಾರ ಅಂತಹ ಸಂಸ್ಕಾರವನ್ನು ಕಲಿಸುವಂತಹ ಕೆಲಸವನ್ನು ಈ ವಿದ್ಯಾಲಯ ಮಾಡುತ್ತಿದೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಶಾಲಾ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿಯನ್ನು ಆಕಾಂಕ್ಷ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಡಾ. ಶ್ರೀಶ ಭಟ್ ಇವರು ವಿತರಿಸಿದರು. ಅಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿ ಅಧ್ಯಕ್ಷರಾದ ಡಾ.ಮುರಳೀಧರರವರು ವಹಿಸಿದ್ದರು. ಶಾಲಾ ಆಡಳಿತ ಮಂಡಳಿಯ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಸ್ವಾಗತಿಸಿ, ಮುಖ್ಯ ಗುರು ಗಣೇಶ ವಾಗ್ಲೆ ವಂದಿಸಿದರು. ಭಾಗೀರಥಿ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here