





ಪುತ್ತೂರು: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪುತ್ತೂರು ಇದರ ಕೆದಂಬಾಡಿ ವಲಯದ ತ್ರೈಮಾಸಿಕ ಸಭೆಯು ಕೆದಂಬಾಡಿ ಗ್ರಾಪಂ ಸಭಾ ಭವನದಲ್ಲಿ ಇತ್ತೀಚೆಗೆ ನಡೆಯಿತು. ಕುಂಬ್ರ ವಲಯ ಅಧ್ಯಕ್ಷ ಎಸ್.ಮಾಧವ ರೈ ಕುಂಬ್ರರವರು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.


ತಾಲೂಕು ಯೋಜನಾಧಿಕಾರಿ ಶಶಿಧರ್ರವರು ನೂತನ ಬ್ಯಾಂಕಿಂಗ್ ಲೋನ್ ಆಪ್ ಬಗ್ಗೆ ಮಾಹಿತಿ ನೀಡಿದರು. ವಲಯ ಮೇಲ್ವಿಚಾರಕಿ ಮೋಹಿನಿಯವರು ಸಂಘದ ಸಾಲದ ಬಗ್ಗೆ ಮಾಹಿತಿ ನೀಡಿದರು. ಒಕ್ಕೂಟದ ಅಧ್ಯಕ್ಷ ಸೀತಾರಾಮ ಗೌಡ ಇದ್ಯಪೆಯವರು ಸಭಾಧ್ಯಕ್ಷತೆ ವಹಿಸಿದ್ದರು. ಚಂದ್ರ ಸ್ವಾಗತಿಸಿ, ಸುರೇಶ್ ಇದ್ಪಾಡಿ ವಂದಿಸಿದರು. ಸೇವಾ ಪ್ರತಿನಿಧಿ ರಜನಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಧನಲಕ್ಷ್ಮೀ ಮತ್ತು ಶ್ರೀ ಮಹಾಲಕ್ಷ್ಮೀ ತಂಡದ ಸದಸ್ಯರುಗಳು ಸಹಕರಿಸಿದ್ದರು.














