ಪುತ್ತೂರು: ಸಮಾಜ ಕಲ್ಯಾಣ ಇಲಾಖಾ ವತಿಯಿಂದ 2022-23ನೇ ಸಾಲಿನಲ್ಲಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನಕ್ಕಾಗಿ ಆಯ್ಕೆಯಾಗಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂ. 15ರಿಂದ ಜು. 15ರವರೆಗೆ ಅವಕಾಶ ಕಲ್ಪಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆಯ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಅರ್ಜಿಗಳನ್ನು www.sw.kar.nic.in ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.