ಪುತ್ತೂರು: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ವಾಣಿಜ್ಯ ವಿಭಾಗ, ಐ.ಕ್ಯೂ.ಎ.ಸಿ ಹಾಗೂ ವಾಣಿಜ್ಯ ಸಂಘದ ವತಿಯಿಂದ ಜೂನ್ 17 ರಂದು ಕಾಲೇಜು ಮಟ್ಟದ ಕಾಮ್ ಕ್ವೆಸ್ಟ್ 2023 ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಗಳಾಗಿ ನವೀನ್ ರೈ ಚೆಲ್ಯಡ್ಕ ಭಾಗವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಇಂತಹ ಕಾರ್ಯಕ್ರಮಗಳು ಅವಶ್ಯಕ ಎಂದರಲ್ಲದೆ ವಿದ್ಯಾರ್ಥಿಗಳೇ ಆಯೋಜಿಸುತ್ತಿರುವುದರ ಕುರಿತು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.
ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ ಮಾತನಾಡಿ ಪದವಿ ವಿದ್ಯಾರ್ಥಿಗಳಲ್ಲಿ ಉನ್ನತ ವ್ಯಾಸಂಗದ ಅರಿವು ಮೂಡಲು ಇಂತಹ ಕಾರ್ಯಕ್ರಮಗಳು ದಾರಿದೀಪವಾಗುವುದು ಎಂದು ಹೇಳಿದರು.
ಪ್ರಥಮ ಹಾಗೂ ದ್ವಿತೀಯ ಬಿ ಕಾಂ ವಿದ್ಯಾರ್ಥಿಗಳಿಗೆ ವಿವಿಧ ವಾಣಿಜ್ಯ ಸ್ಪರ್ಧೆಗಳನ್ನು ನಡೆಸಲಾಯಿತು. ಬೆಸ್ಟ್ ಮ್ಯಾನೇಜರ್, ಫಿನಾನ್ಸ್, ಮಾರ್ಕೆಟಿಂಗ್, ಹ್ಯುಮನ್ ರಿಸೋರ್ಸ್, ಕೊಲ್ಯಾಜ್, ಟ್ರೆಷರಿ ಹಂಟ್, ಕ್ವಿಜ್ ಮುಂತಾದ ಸ್ಪರ್ಧೆಗಳನ್ನು ತೃತೀಯ ಬಿ ಕಾಂ ವಿದ್ಯಾರ್ಥಿಗಳು ಆಯೋಜಿಸಿದರು.
ಪದವಿ ವ್ಯಾಸಂಗಕ್ಕೆ ದಾಖಲಾಗಿರುವ ವಿದ್ಯಾರ್ಥಿಗಳ ಜೊತೆಗೆ ವಾಣಿಜ್ಯ ವಿಭಾಗದ ಮುಖ್ಯಸ್ಥ ಹರಿಪ್ರಸಾದ್ ಎಸ್ ಸಂವಾದ ನಡೆಸಿದರು.
ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಅತಿಥಿಯಾಗಿ ಭಾಗವಹಿಸಿದ ಅವಿನಾಶ್ ರೈ ಕುಡ್ಚಿಲ ಬಹುಮಾನ ವಿತರಿಸಿದರು. ಐಕ್ಯೂಎಸಿ ಸಂಚಾಲಕ ಡಾ. ಕಾಂತೇಶ್ ಎಸ್ ಮಾತನಾಡಿ ಗೆಲುವಿನಷ್ಟೇ ಮಹತ್ವ ಭಾಗವಹಿಸುವಿಕೆಗೂ ಇದೆ ಎಂದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಹರಿಪ್ರಸಾದ್ ಎಸ್ ಮಾತನಾಡಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದ ಸರ್ವರಿಗೂ ವಂದಿಸಿದರಲ್ಲದೆ ಈ ರೀತಿಯ ಚಟುವಟಿಕೆಗಳು ವಿದ್ಯಾರ್ಥಿಗಳಿಗೆ ಸ್ಪೂರ್ತಿ ನೀಡಲಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿ ಸಂಧ್ಯಾಲಕ್ಷ್ಮಿ, ಶಶಿಕಲ, ಹರ್ಷಿತ ,ಉಪನ್ಯಾಸಕರಾದ ಶಿವಪ್ರಸಾದ್ ಕೆ ಆರ್, . ನವೀನ್ ಕುಮಾರ್, ವಿನುತಾ ಹಾಗೂ ಹಿರಿಯ ವಿದ್ಯಾರ್ಥಿಗಳಾದ ನವ್ಯ ಶ್ರೀ, ಹರಿಣಾಕ್ಷಿ, ಅಶ್ವಿನಿ, ಭವ್ಯ ಸಹಕರಿಸಿದರು. ವಾಣಿಜ್ಯ ಸಂಘದ ಪದಾಧಿಕಾರಿಗಳು ಹಾಗೂ ವಾಣಿಜ್ಯ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.