ಕುರಿಯ ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ಪುಸ್ತಕ ವಿತರಣೆ

0

ಪುತ್ತೂರು: ಜಗತ್ತಿಗೆ ಸಮಾನತೆಯ ಮನುಷ್ಯತ್ವದ ಪಾಠ ಸಾರಿದ ಬ್ರಹ್ಮ ಶ್ರೀ ನಾರಾಯಣ ಗುರುಗಳ ಬೋಧಿಸಿದ ತತ್ವಗಳನ್ನು ಜೀವನದಲ್ಲಿ ಅಳವಡಿಸಿ ಸರ್ವರನ್ನು ಸಮಾನವಾಗಿ ಕಾಣಬೇಕು. ಸಾಮರಸ್ಯದ ಜೀವನ ನಮ್ಮದಾಗಬೇಕೆಂದು ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಕಾರ್ಯನಿರ್ವಹಣಾಧಿಕಾರಿ ಹೊನ್ನಪ್ಪ ಪೂಜಾರಿ ಕೈಂದಾಡಿರವರು ಹೇಳಿದರು.


ಅವರು ಕುರಿಯ ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಹೊನ್ನಪ್ಪ ಪೂಜಾರಿ ಹೇಳಿದರು.
ಕುರಿಯ ಪಂಚಾಯತ್ ಸಭಾಂಗಣದಲ್ಲಿ ಜರಗಿದ ಕುರಿಯ ಬಿಲ್ಲವ ಗ್ರಾಮ ಸಮಿತಿಯ ವಾರ್ಷಿಕ ಸಭೆ ಹಾಗೂ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕಾರ್ಯಕ್ರಮವು ಅಧ್ಯಕ್ಷತೆಯನ್ನು ಕುರಿಯ ಬಿಲ್ಲವ ಗ್ರಾಮ ಸಮಿತಿಯ ಅಧ್ಯಕ್ಷ ಸುಂದರ್ ಪೂಜಾರಿ ಬೋಳಂತಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರು ಬಿಲ್ಲವ ಸಂಘದ ಕಾರ್ಯದರ್ಶಿ ಚಿದಾನಂದ ಸುವರ್ಣ ಉದ್ಘಾಟಿಸಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷ ಚಂದ್ರಕಲಾ ಮುಕ್ವೆ, ಅರ್ಯಾಪು ವಲಯ ಸಂಚಾಲಕ ರಾಜೇಶ್ ಆರ್ಲಪದವು ಮತ್ತು ಪುತ್ತೂರು ಯುವವಾಹಿನಿ ಘಟಕದ ಅಧ್ಯಕ್ಷ ಉಮೇಶ್ ಬಾಯರು, ಕುರಿಯ ಮಹಿಳಾ ವೇದಿಕೆಯ ಅಧ್ಯಕ್ಷ ರಮ್ಯಾ ಪಡ್ದ್ಪು ಉಪಸ್ಥಿತರಿದ್ದರು.
ಮಾಜಿ ಅಧ್ಯಕ್ಷ ಶಶಿಧರ್ ಕಿನ್ನಿಮಜಲ್ ಸ್ವಾಗತಿಸಿ, ಹರೀಶ್ ಡಿಂಬ್ರಿ ಕಾರ್ಯಕ್ರಮ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here