ಪುತ್ತೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆನಡ್ಕದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.ಎಸ್ ಡಿ ಎಂ ಸಿ ಅಧ್ಯಕ್ಷ ನಾರಾಯಣ ಸುವರ್ಣ ದೀಪ ಬೆಳಗಿಸಿ ಶುಭ ಹಾರೈಸುವುದರೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
” ಪ್ರತಿ ಮನೆ ಅಂಗಳದಲ್ಲಿ ಯೋಗ” ಎಂಬ ಘೋಷವಾಕ್ಯದೊಂದಿಗೆ ಶಾಲಾ ಮುಖ್ಯ ಶಿಕ್ಷಕಿ ಶುಭಲತಾ ಯೋಗ ಮತ್ತು ಧ್ಯಾನದ ಮಹತ್ವವನ್ನು ತಿಳಿಸಿಕೊಟ್ಟರು.
ಶಿಕ್ಷಕಿ ಸೌಮ್ಯ ಪ್ರತಿಜ್ಞಾವಿಧಿಯನ್ನು ಬೋಧಿಸಿದರು.ಸಹ ಶಿಕ್ಷಕಿ ಮಾಲತಿ ಇವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಯೋಗಾಸನಗಳನ್ನು ಪ್ರದರ್ಶಿಸಿದರು.
ಸಹಶಿಕ್ಷಕಿ ಫೆಲ್ಸಿಟಾ ಡಿಕುನ್ಹಾ ಸ್ವಾಗತಿಸಿ, ಶ್ರೀಮತಿ ಲೀಲಾವತಿ ಎಲ್ಲರನ್ನೂ ವಂದಿಸಿದರು.ನೀತಾ ಸಹಕರಿಸಿದರು.
ಎಸ್ ಡಿ ಎಂ ಸಿ ಸದಸ್ಯರು ಹಾಗೂ ಪೋಷಕರು ಉಪಸ್ಥಿತರಿದ್ದರು.