ಉಪ್ಪಿನಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಯೋಗ ದಿನ ಆಚರಣೆ

0

ಉಪ್ಪಿನಂಗಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರದಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.


ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ ಹಾಗೂ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಹಳೆ ವಿದ್ಯಾರ್ಥಿನಿ ಯೋಗಪಟು ಇಂದ್ರಪ್ರಸ್ಥ ಶಿಕ್ಷಣ ಸಂಸ್ಥೆಯ ಯೋಗ ಶಿಕ್ಷಕಿ ಶ್ರೀಮತಿ ಕೆ. ವಿದ್ಯಾರವರು ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಯೋಗ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.


ಪ್ರಾಂಶುಪಾಲ ಪ್ರೊ.ಸುಬ್ಬಪ್ಪ ಕೈಕಂಬ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರವೀಣ್ ಕುಮಾರ್ ಸ್ವಾಗತಿಸಿದರು. ಉಪನ್ಯಾಸಕಿ ಡಾ. ಬಸವರಾಜೇಶ್ವರಿ ದಿಡ್ಡಿಮನಿ ವಂದಿಸಿದರು. ಕುಮಾರಿ ಚೈತನ್ಯ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here