ರಾಮಕುಂಜ ಆ.ಮಾ.ಶಾಲೆಯಲ್ಲಿ ಯೋಗ ದಿನಾಚರಣೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 9ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು “ವಸುದೈವ ಕುಟುಂಬಕಂ” ಎಂಬ ಧ್ಯೇಯದೊಂದಿಗೆ ಆಚರಿಸಲಾಯಿತು.

ಸಂಸ್ಥೆಯ ಕಾರ್ಯದರ್ಶಿ ಕೆ. ಸೇಸಪ್ಪ ರೈಯವರು ಮಾತನಾಡಿ, ಪ್ರತಿಯೊಬ್ಬರ ಮಾನಸಿಕ ಮತ್ತು ದೈಹಿಕ ಸಮತೋಲನ ಕಾಪಾಡುವಲ್ಲಿ ಯೋಗವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ತಿಳಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕಿ ಪ್ರೇಮಾ ಬಿ.ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕರ ಸಹಕಾರದಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಮಾಡಿಸಲಾಯಿತು. ಸಂಸ್ಥೆಯ ಆಡಳಿತಾಧಿಕಾರಿಗಳು, ಸಂಸ್ಥೆಯ ಮುಖ್ಯೋಪಾಧ್ಯಾಯರು, ನಿಲಯ ವ್ಯವಸ್ಥಾಪಕರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here