ಕಾಂಗ್ರೆಸ್ ಗ್ಯಾರಂಟಿ ಸಪ್ತಾಹ ಶಾಸಕ ಅಶೋಕ್ ರೈಯವರಿಗೆ ಸನ್ಮಾನ, ಕಾರ್ಯಕರ್ತರಿಗೆ ಅಭಿನಂದನೆ
ಪುತ್ತೂರು:ಇರ್ದೆ-ಬೆಟ್ಟಂಪಾಡಿ ಗ್ರಾಮೀಣ ವಲಯ ಕಾಂಗ್ರೆಸ್ ಇದರ ವತಿಯಿಂದ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಉಚಿತ ನೋಂದಣಿ ಶಿಬಿರ ʼಕಾಂಗ್ರೆಸ್ ಗ್ಯಾರಂಟಿ ಸಪ್ತಾಹ’, ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸನ್ಮಾನ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮಗಳು ಜೂ.24ರಂದು ಬೆಟ್ಟಂಪಾಡಿ ಗ್ರಾ.ಪಂ ಸಮುದಾಯ ಭವನದಲ್ಲಿ ನಡೆಯಲಿದೆ.
ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಯುವಶಕ್ತಿ ಹಾಗೂ ಯುವನಿಧಿ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ಗ್ರಾಮದ ಫಲಾನುಭವಿಗಳಿಗೆ ಉಚಿತವಾಗಿ ನೋಂದಣಿ ಶಿಬಿರವು ಜೂ.24ರಿಂದ ಪ್ರಾರಂಭಗೊಂಡು ಜು.1ರ ತನಕ ನಡೆಯಲಿದೆ. ಗ್ರಾಮಸ್ಥರು ಇದರ ಪ್ರಯೋಜನ ಪಡೆದುಕೊಳ್ಳಬಹುದು.
ಉಚಿತ ನೋಂದಣಿ ಶಿಬಿರವನ್ನು ಶಾಸಕ ಅಶೋಕ್ ಕುಮಾರ್ ರೈಯವರು ಉದ್ಘಾಟಿಸಲಿದ್ದಾರೆ. ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ.ರಘು ಬೆಳ್ಳಿಪ್ಪಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಹೇಮನಾಥ ಶೆಟ್ಟಿ ಕಾವು, ಮಹಮ್ಮದ್ ಬಡಗನ್ನೂರು, ಬ್ಲಾಕ್ ಕಾಂಗ್ರೆಸ್ ಎಸ್ಟಿ ಘಟಕದ ಅಧ್ಯಕ್ಷ ಮಹಾಲಿಂಗ ನಾಯ್ಕ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಅಮಳ, ಲೋಕೋಪಯೋಗಿ ಇಲಾಖೆ ಗುತ್ತಿಗೆದಾರ ಆಲಿಕುಂಞಿ ಕೊರಿಂಗಿಲ, ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ ಉಪ್ಪಳಿಗೆ, ಜಿಲ್ಲಾ ಕಾಂಗ್ರೆಸ್‌ನ ಮಾಜಿ ಸದಸ್ಯ ಐತ್ತಪ್ಪ ಪೇರಲ್ತಡ್ಕ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಾರ್ಯಕ್ರಮದಲ್ಲಿ ನೂತನ ಶಾಸಕ ಅಶೋಕ್ ಕುಮಾರ್ ರೈಯವರಿಗೆ ಸನ್ಮಾನ ಹಾಗೂ ಕಾರ್ಯಕರ್ತರಿಗೆ ಅಭಿನಂದನೆ ನಡೆಯಲಿದೆ ಎಂದು ಇರ್ದೆ-ಬೆಟ್ಟಂಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ನವೀನ್ ರೈ ಚೆಲ್ಯಡ್ಕ ತಿಳಿಸಿದ್ದಾರೆ.