ವಿಟ್ಲ: ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಮತ್ತು ಹೂಸತಾಗಿ ದಾಖಲಾಗಿರುವ ಮಕ್ಕಳಿಗೆ “ಟ್ಯಾಲೆಂಟಾನ್ ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಜೂ. 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಮಕ್ಕಳಿಗೆ ಯೋಗಾಭ್ಯಾಸ ಮಾಡಿ ಯೋಗದ ಮಹತ್ವ ವನ್ನು ತಿಳಿಸಿಕೊಡಲಾಯಿತು.
ಬಳಿಕ ನಡೆದ “ಟ್ಯಾಲೆಂಟಾನ್” ಸ್ಪರ್ಧೆಯಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷಕ್ಕೆ ಹೊಸದಾಗಿ ದಾಖಲಾತಿ ಪಡೆದಿರುವ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಅವಕಾಶ ನೀಡಲಾಗಿತ್ತು. ಭಾಗವಹಿಸಿದ ಮಕ್ಕಳ ಗಾಯನ, ನೃತ್ಯ, ಚಿತ್ರಕಲೆ, ಭಾಷಣ, ಅಭಿನಯ ಹೀಗೆ ಹಲವು ಪ್ರತಿಭೆಗಳನ್ನು ಗುರುತಿಸಿ ಗೌರವಿಸಲಾಯಿತು.
ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಆಗಮಿಸಿದ್ದ ಯುವ ಪ್ರತಿಭೆ ಆಶಿಕ್ ಕುಕ್ಕಾಜೆರವರು ಮಾತನಾಡಿ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಕೆಲಸ ಜನಪ್ರಿಯ ಶಾಲೆಯಲ್ಲಿ ನಡೆಯುತ್ತಿದ್ದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇದು ಸಹಕಾರಿಯಾಗಲಿದೆ ಎಂದರು.
ವೇದಿಕೆಯಲ್ಲಿ ಶಾಲೆಯ ನಿರ್ದೇಶಕ ನೌಶೀನ್ ಬದ್ರಿಯಾ, ಪ್ರಾಂಶುಪಾಲ ಲಿಬಿನ್ ಕ್ಸೇವಿಯರ್, ಆಡಳಿತಾಧಿಕಾರಿ ಸಫ್ವಾನ್ ಪಿಲಿಕಲ್ ಮೊದಲಾದವರು ಉಪಸ್ಥಿತರಿದ್ದರು.