ಆಲಂಕಾರು:ದುರ್ಗಾಂಬಾ ಪದವಿಪೂರ್ವ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗದಿನಾಚರಣೆಯನ್ನು ಜೂ.21ರಂದು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆಡಳಿತ ಮಂಡಳಿಯ ಅಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು ವಹಿಸಿದ್ದರು. ದುರ್ಗಾಂಬಾ ಪದವಿ ಪೂರ್ವ ಕಾಲೇಜಿನಲ್ಲಿ ಒಟ್ಟು ಮುನ್ನೂರು ಮಂದಿ ವಿದ್ಯಾರ್ಥಿಗಳು ಯೋಗಪ್ರದರ್ಶನ ಮಾಡಿದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಶ್ರೇಯಸ್ಸು ಕುಮಾರ್ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀಪತಿ ರಾವ್ ಹೆಚ್. ಕೆ ಸ್ವಾಗತಿಸಿ, ಕಾಲೇಜಿನ ಉಪನ್ಯಾಸಕಿ ರೂಪ ಧನ್ಯವಾದ ವಂದಿಸಿ, ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ನವೀನ್ ಕುಮಾರ್ ರೈ ನಿರ್ವಹಿಸಿದರು. ಆಡಳಿತ ಮಂಡಳಿಯ ಕಾರ್ಯದರ್ಶಿ ಈಶ್ವರ ಗೌಡ ಪಜ್ಜಡ್ಕ, ಹಾಗು ಅಡಳಿತ ಮಂಡಳಿಯ ಸದಸ್ಯರು, ಕಾಲೇಜು ಮತ್ತು ಪ್ರೌಢಶಾಲೆಯ ಬೋಧಕ ಮತ್ತು ಬೋಧಕೇತರ ವರ್ಗದವರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.