





ಆಲಂಕಾರು: ಕಡಬ, ಶಾಂತಿಮೊಗರು ಮೂಲಕ ಪುತ್ತೂರಿಗೆ ಕೆ.ಎಸ್.ಆರ್.ಟಿ.ಸಿ ಬಸ್ಸು ಸಂಚರಿಸುತ್ತಿದ್ದು ಇದರಿಂದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಿದೆ. ಆದರೆ ಈಗ ಈ ಬಸ್ಸನ್ನು ಅವಲಂಬಿಸಿರುವವರ ಸಂಖ್ಯೆ ಜಾಸ್ತಿಯಾಗಿದ್ದು ಬಸ್ಸಿನ ಓಡಾಟದ ಸಮಯದಲ್ಲಿ ವ್ಯತ್ಯಾಸವಾಗಿದೆ.



ಇದರಿಂದ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಬಸ್ಸು ಬಾರದೆ ರಸ್ತೆ ಬದಿಯಲ್ಲಿ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಮಸ್ಯೆಯನ್ನು ಹೋಗಲಾಡಿಸಲು ಎರಡು ಹೆಚ್ಚುವರಿ ಕೆ.ಎಸ್.ಆರ್.ಟಿ.ಸಿ ಬಸ್ಸನ್ನು ಈ ರೂಟ್ ನಲ್ಲಿ ನಿಯೋಜನೆ ಮಾಡುವಂತೆ ಡಿಪ್ಪೋ ಮ್ಯಾನೇಜರ್ ಗೆ ದ.ಕ ಜಿಲ್ಲಾ ಏಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ ಪೀರ್ ಮಹಮ್ಮದ್ ಸಾಹೇಬ್, ಪುತ್ತೂರು ತಾಲೂಕು ಬಂಟರ ಸಂಘದ ನಿರ್ದೇಶಕ ರಾಧಾಕೃಷ್ಣ ರೈ ಪರಾರಿಗುತ್ತು, ಆಲಂಕಾರು ಸರಕಾರಿ ಶಾಲಾ ಎಸ್.ಡಿ.ಎಂ.ಸಿ ಮಾಜಿ ಅಧ್ಯಕ್ಷ ಅಬೂಬಕ್ಕರ್ ನೆಕ್ಕರೆ ಮತ್ತು ಅಬ್ಬಾಸ್ ಕೋಚಕಟ್ಟೆ ಮನವಿ ಸಲ್ಲಿಸಿದ್ದಾರೆ.












