![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ರಾಜೀನಾಮೆ ಘೋಷಣೆ ಮಾಡಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಚುನಾವಣೆ ಸೋಲಿನ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿರುವುದಾಗಿ ಹೇಳಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷರಾಗಿ ನನ್ನ ಎರಡು ವರ್ಷದ ಅವಧಿ ಮುಗಿದಿದೆ. ಅದರ ಬೆನ್ನಿನಲ್ಲಿಯೇ ನಾನು ರಾಜೀನಾಮೆಯನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ.
![](https://puttur.suddinews.com/wp-content/uploads/2023/06/download-2-1.jpg)