ವಿಟ್ಲ: ಮಾಣಿ ಗ್ರಾಮ ಪಂಚಾಯತ್ ವತಿಯಿಂದ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಆರೋಗ್ಯ ಅಭಿಯಾನದಡಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಫಲಾನುಭವಿಗಳಿಗಾಗಿ ಜರುಗಿದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಪಂಚಾಯತ್ ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ.ಮಾಣಿ, ನಾರಾಯಣ ಶೆಟ್ಟಿ, ರಮಣಿ.ಡಿ.ಪೂಜಾರಿ, ಸಮುದಾಯ ಆರೋಗ್ಯ ಅಧಿಕಾರಿ ಅಶ್ವಿನಿ, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಭಾರತಿ ಮೊದಲಾದವರು ಉಪಸ್ಥಿತರಿದ್ದರು.