ಜು.4 ಆಕ್ಷೇಪಣೆಗಳನ್ನು ಸಲ್ಲಿಸಲು ಅಂತಿಮ ದಿನ
ಪುತ್ತೂರು: ಮುಂಬರುವ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಕರಡುಪಟ್ಟಿಯನ್ನು ಪ್ರಕಟಮಾಡಲಾಗಿದ್ದು ಮತದಾರರಿಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಲು ದಿನಾಂಕ ನಿಗಧಿಗೊಳಿಸಿ ಆದೇಶಿಸಲಾಗಿದೆ.
ದ.ಕ ಜಿಲ್ಲೆಯ ಮಂಗಳೂರು, ಮುಲ್ಕಿ, ಮೂಡಬಿದ್ರೆ, ಉಳ್ಳಾಲ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕು ಕಚೇರಿಗಳಲ್ಲಿ ಹಾಗೂ ಗ್ರಾಮ ಪಂಚಾಯತ್ ಕಚೇರಿಗಳಲ್ಲಿ ಮತದಾರರ ಕರಡು ಪಟ್ಟಿಯನ್ನು ಪ್ರಕಟಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಮತದಾರರಿಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಬಹುದಾಗಿದ್ದು ಜು.4 ಆಕ್ಷೇಪಣೆಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಜು.7ರಂದು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುವುದು, ಜು.12ರಂದು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಿದ ನಂತರದ ಅಗತ್ಯ ಬದಲಾವಣೆಗಳನ್ನು ಮಾಡಿಸಿ ಅಂತಿಮ ಚೆಕ್ ಲಿಸ್ಟ್ ಪಡೆದುಕೊಂಡು ಕ್ಷೇತ್ರದ ವ್ಯಾಪ್ತಿಯಲ್ಲಿ ಮತ್ತೊಮ್ಮೆ ಪರಿಶೀಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.