ನೆಲ್ಯಾಡಿ: ವಿದ್ಯಾರ್ಥಿಗಳು ಕಲಿಕೆಯ ಜೊತೆಗೆ ಸಹಪಠ್ಯ ಚಟುವಟಿಕೆಯಲ್ಲೂ ಸಕ್ರೀಯರಾಗಬೇಕು ಎಂಬ ಉದ್ದೇಶದಿಂದ ಕಡಬ ತಾಲೂಕಿನ ಗೋಳಿತ್ತಟ್ಟು ಶಾಂತಿನಗರ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ನಾಟ್ಯಾರಾಧನಾ ನೃತ್ಯಾಲಯ ಆಲಂಕಾರು ಇದರ ವತಿಯಿಂದ ವಿದ್ವಾನ್ ರಾಘವೇಂದ್ರ ಪ್ರಸಾದ್ರವರ ಮಾರ್ಗದರ್ಶನದಲ್ಲಿ ಭರತನಾಟ್ಯ ತರಗತಿಯನ್ನು ಆರಂಭಿಸಲಾಯಿತು.
ಎಸ್ಡಿಎಂಸಿ ಅಧ್ಯಕ್ಷ ಪುರುಷೋತ್ತಮ ಗುರುಂಪು ಅವರು ತರಗತಿ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ನೃತ್ಯ, ಸಂಗೀತ ಮೊದಲಾದ ಕಲೆಗಳನ್ನು ಒಗ್ಗೂಡಿಸುವುದರಿಂದ ಜೀವನದಲ್ಲಿ ಮುಂದಕ್ಕೆ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ತಿಳಿಸಿದರು. ನಾಟ್ಯಗುರು ವಿದ್ವಾನ್ ರಾಘವೇಂದ್ರ ಪ್ರಸಾದ್ರವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯಗುರು ಪ್ರದೀಪ್ ಬಾಕಿಲರವರು ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕ ಮಂಜುನಾಥ ಮಣಕವಾಡ ವಂದಿಸಿದರು. ಕಾರ್ಯಕ್ರಮದಲ್ಲಿ ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.