ಪುತ್ತೂರು: ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ತನಿಖಾ ದಳ (ಎನ್.ಐ.ಎ) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಬೆಳ್ತಂಗಡಿಯ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ನಿವಾಸಕ್ಕೆ ಎನ್.ಐ.ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ, ದಾಳಿ ವೇಳೆ ನೌಷದ್ ಮನೆಯಲ್ಲಿರಲ್ಲಿಲ್ಲ ಎನ್ನಲಾಗಿದೆ. ಅಧಿಕಾರಿಗಳು ಎನ್.ಐ.ಎ ಕಚೇರಿಗೆ ಹಾಜರಾಗುವಂತೆ ನೌಷದ್ ಗೆ ನೋಟಿಸ್ ಜಾರಿಗೊಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಕೊಡಗು ಜಿಲ್ಲೆಯ ಸೋಮವಾರ್ ಪೇಟೆಯಲ್ಲಿಯೂ ಎನ್ ಈ ಎ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ