ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ.ವರ್ಗಾವಣೆ

0

ಪುತ್ತೂರು:ಕಳೆದೆರಡು ವರ್ಷಗಳಿಂದ ದ.ಕ.ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹಿರಿಯ ಶ್ರೇಣಿಯ ಕೆಎಎಸ್ ಅಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ.ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಸರಕಾರದ ಉಪಕಾರ್ಯದರ್ಶಿ-1(ಮಂಡಳಿ, ನಗರಾಭಿವೃದ್ಧಿ ಇಲಾಖೆ)ಹುದ್ದೆಗೆ ಇವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ(ಸೇವೆಗಳು-2)ಅಧೀನ ಕಾರ್ಯದರ್ಶಿ ಉಮಾದೇವಿ ಆದೇಶ ಹೊರಡಿಸಿದ್ದಾರೆ. ಕೃಷ್ಣಮೂರ್ತಿ ಹೆಚ್.ಕೆ.ಅವರು ಈ ಹಿಂದೆ ಪುತ್ತೂರು ಉಪವಿಭಾಗಾಧಿಕಾರಿಯಾಗಿಯೂ ಕೆಲಸ ಮಾಡಿ ಜನಮನ್ನಣೆಗಳಿಸಿದ್ದರು.

LEAVE A REPLY

Please enter your comment!
Please enter your name here