ಪುತೂರು: ಹಿರಿಯ ನ್ಯಾಯವಾದಿಯಾಗಿದ್ದು, ಒಕ್ಕಲಿಗ ಗೌಡ ಸೇವಾ ಸಂಘದ ಮಾಜಿ ಅಧ್ಯಕ್ಷ ಮತ್ತು ಕೊಂಬೆಟ್ಟು ಶ್ರೀ ಮಹಾಲಿಂಗೇಶ್ವರ ಐಟಿಐ ಮಾಜಿ ನಿರ್ದೇಶಕರಾಗಿದ್ದ ಚಂದ್ರಶೇಖರ್ ಗೌಡ ಮುಂಗ್ಲಿಮನೆ(81ವ) ಜೂ.29ರಂದು ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು.
ಬೆಳಿಗ್ಗೆ ಬೆಂಗಳೂರಿನಿಂದ ಬಂದಿರುವ ಪುತ್ರಿಯನ್ನು ಬಸ್ ನಿಲ್ದಾಣದಿಂದ ದರ್ಬೆಯಲ್ಲಿರುವ ಮನೆಗೆ ಕಾರಿನಲ್ಲಿ ಕರೆದುಕೊಂಡು ಬಂದ ಬಳಿಕ ಮನೆಯಲ್ಲೇ ಚಯರ್ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಅವರು ಹೃದಯಾಘಾತದಿಂದ ನಿಧನರಾದರು.
ಮೃತರು ಪತ್ನಿ ವಸಂತಿ, ಪುತ್ರಿಯರಾದ ಜ್ಯೋತಿ ಮತ್ತು ಸೌಮ್ಯ ಅವರನ್ನು ಅಗಲಿದ್ದಾರೆ. ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಶ್ರೀ ಮಹಾಲಿಂಗೇಶ್ವರ ಐಟಿಐ ಸಂಚಾಲಕ ಯು.ಪಿ.ರಾಮಕೃಷ್ಣ ಮತ್ತು ನಿರ್ದೇಶಕರು, ಪ್ರಾಂಶುಪಾಲ ಪ್ರಕಾಶ್ ಪೈ, ವಕೀಲರ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಗೌಡ ಮತ್ತು ಪದಾಧಿಕಾರಿಗಳು, ಸದಸ್ಯರು ಮೃತರ ಮನೆಗೆ ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.