![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ನೆಲ್ಯಾಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತಕ್ಕೆ ಒಳಪಟ್ಟ ಕಾಂಚನ ಪ್ರೌಢಶಾಲೆಯ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಲು ಸಂಸ್ಥೆಯ ಕಾರ್ಯದರ್ಶಿ ಡಿ.ಹರ್ಷೇಂದ್ರ ಕುಮಾರ್ರವರು ಭೇಟಿ ನೀಡಿದರು.
ಶಾಲೆಯ ಮುಖ್ಯಗುರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಫಲ ಪುಷ್ಪ ನೀಡಿ ಗೌರವಪೂರ್ವಕವಾಗಿ ಸ್ವಾಗತಿಸಿದರು. ಎನ್.ಎಂ.ಎಂ.ಎಸ್ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡ 9ನೇ ತರಗತಿಯ ವಿದ್ಯಾರ್ಥಿನಿ ಪ್ರೀತಿಕಾರನ್ನು ಡಿ.ಹರ್ಷೇಂದ್ರಕುಮಾರ್ರವರು ಹೂ ಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಶಿಕ್ಷಕರಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿ ಶುಭ ಹಾರೈಸಿದರು. ಅನಂತರ ತರಗತಿಗಳಿಗೆ ತೆರಳಿ ಮಕ್ಕಳೊಂದಿಗೆ ಸಂವಹನ ನಡೆಸಿದರು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕ ಸತೀಶ್ಚಂದ್ರ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಸೋಮಶೇಖರ್ ಶೆಟ್ಟಿ ಉಪಸ್ಥಿತರಿದ್ದರು.