ಪುತ್ತೂರು: ಇಲ್ಲಿನ ಮುಕ್ರಂಪಾಡಿಯಲ್ಲಿರುವ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಇದರ ವಿದ್ಯಾರ್ಥಿ ಸಂಘದ ಉದ್ಘಾಟನ ಸಮಾರಂಭ ಜೂ.28 ರಂದು ಜರಗಿತು.ಕಾಲೇಜನ ಪ್ರಾಂಶುಪಾಲೆ ಪ್ರಮೀಳಾ ಜೆಸ್ಸಿ ಕ್ರಾಸ್ತಾ ಸಭಾಧ್ಯಕ್ಷತೆ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಸರಕಾರಿ ಪಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇದರ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಹರಿಪ್ರಸಾದ್ ಎಸ್ ದೀಪ ಪ್ರಜ್ವಲಿಸಿ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಕಲಿಕೆ ವಿಷಯಗಳನ್ನು ಜೀವನಕೋಸ್ಕರ ಅಂತ ಕಲಿತರೆ ಜೀವನದಲ್ಲಿ ಯಶಸ್ಸು ಸಾಧ್ಯ. ಸಂವಹನ ಕೌಶಲ್ಯ ನಾಯಕತ್ವ ಗುಣ,ಅವಕಾಶಗಳ ಮುಕ್ತ ಬಳಕೆಯ ಮೂಲಕ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಹೇಳಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲರು ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಭೋದಿಸಿ ಮಾತನಾಡಿ, ವಿದ್ಯಾರ್ಥಿ ಸಂಘದ ರಚನೆ, ಮತದಾನದ ಮಹತ್ವ, ನಾಯಕತ್ವದ ಬಗ್ಗೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಹಿರಿಯ ಉಪನ್ಯಾಸಕಿ ಚಿತ್ರಲೇಖ, ವಿದ್ಯಾರ್ಥಿ ನಾಯಕಿ ದ್ವಿತೀಯ ವಿಜ್ಞಾನ ವಿಭಾಗದ ಫಾತಿಮ್ ಅಶ್ಮಿಲಾ, ಕಾರ್ಯದರ್ಶಿ ದ್ವಿತೀಯ ವಿಜ್ಞಾನ ವಿಭಾಗದ ಅಫೀಝ ಉಪಸ್ಥಿತರಿದ್ದರು. ಭೂಮಿಕ ಹಾಗೂ ಪವಿತ್ರ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ಉಪನ್ಯಾಸಕಿ ಚಿತ್ರಲೇಖ ಸ್ವಾಗತಿಸಿ, ಅರ್ಥಶಾಸ್ತ್ರ ಉಪನ್ಯಾಸಕಿ ಶೋಭಾ ಏನೆಕಲ್ಲು ವಂದಿಸಿದರು. ಇತಿಹಾಸ ಉಪನ್ಯಾಸಕ ದಾಮೋದರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಗಣಿತಶಾಸ್ತ್ರ ಉಪನ್ಯಾಸಕಿ ಜಯಲಕ್ಷ್ಮೀ ಹಾಗೂ ಇತಿಹಾಸ ಉಪನ್ಯಾಸಕ ದಾಮೋದರ್ ಕಾರ್ಯಕ್ರಮ ನಿರ್ವಹಿಸಿದ್ದರು.