ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ‘ವಿದ್ಯಾಮಾತಾ ಅಕಾಡೆಮಿ’ಯಲ್ಲಿ ಸ್ಪೋಕನ್ ಇಂಗ್ಲೀಷ್ ತರಬೇತಿಯನ್ನು ಪ್ರಾರಂಭಿಸಲಾಗಿದ್ದು, ಸಹಕಾರ ರತ್ನ ಪ್ರಶಸ್ತಿ ವಿಜೇತರಾದ ಶ್ರೀ ದಂಬೆಕಾನ ಸದಾಶಿವ ರೈ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿದ್ಯಾಮಾತಾ ಅಕಾಡೆಮಿಯು ಸರಕಾರಿ ಮತ್ತು ಖಾಸಗಿ ಉದ್ಯೋಗ ಕ್ಷೇತ್ರದಲ್ಲಿ ವಿವಿಧ ತರಬೇತಿಗಳ ಮೂಲಕ ಸಾವಿರಾರು ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗ ಕೊಡಿಸಿರುವುದಕ್ಕೆ ಶ್ಲಾಘಿಸಿದರು. ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡ ದಂಬೆಕಾನ ಸದಾಶಿವ ರೈ ರವರು ವಿದ್ಯಾಮಾತಾ ಅಕಾಡೆಮಿಯ ಮುಂದಿನ ಎಲ್ಲಾ ಯೋಜನೆಗಳಿಗೆ ಶುಭವನ್ನು ಹಾರೈಸಿದರು.
ವಿದ್ಯಾಮಾತಾ ಅಕಾಡೆಮಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಹಾಗೂ ಕಂಪ್ಯೂಟರ್ ಅಕೌಂಟಿಂಗ್ ಕೋರ್ಸುಗಳನ್ನು ಪಡೆಯುವವರಿಗೆ ಸ್ಪೋಕನ್ ಇಂಗ್ಲಿಷ್ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತಿದೆ .
“ಸರಕಾರಿ ನೇಮಕಾತಿಗಳಿರಬಹುದು, ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಅವಕಾಶಗಳಿಗೆ ನಡೆಯುವ ಸಂದರ್ಶನವಿರಬಹುದು, ಎಲ್ಲದಕ್ಕೂ ಇಂಗ್ಲೀಷ್ ಭಾಷಾಜ್ಞಾನ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ವಿದ್ಯಾಮಾತಾ ಅಕಾಡೆಮಿಯಲ್ಲಿ ಯಾವುದೇ ತರಬೇತಿಯನ್ನು ಪಡೆಯುವವರಿಗೆ ಉಚಿತ ತರಬೇತಿಯನ್ನು ನೀಡಲಾಗುವುದು” ಎಂದು ವಿದ್ಯಾಮಾತಾ ಅಕಾಡೆಮಿಯ ನಿರ್ದೇಶಕ ಭಾಗ್ಯೇಶ್ ರೈ ರವರು ತಿಳಿಸಿದರು.
ಹೆಚ್ಚಿನ ಮಾಹಿತಿಗಾಗಿ :ವಿದ್ಯಾಮಾತಾ ಅಕಾಡೆಮಿ
ಹಿಂದೂಸ್ತಾನ್ ಕಾಂಪ್ಲೇಕ್ಸ್, ಎಪಿಯಂಸಿ ರಸ್ತೆ, ಪುತ್ತೂರು. ದ.ಕ
ಫೋನ್ ನಂ: 9148935808 / 9620468869