ವಿದ್ಯಾರ್ಥಿಗಳು ಜೀವನದ ಗುರಿ ಮುಟ್ಟಲು ಪ್ರಯತ್ನಶೀಲರಾಗಬೇಕು -ಡಾ.ಗಾನ ಪಿ.ಕುಮಾರ್
ಸವಣೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ಜೀವನದಲ್ಲಿ ಗುರಿಯಿದ್ದು, ಆ ಗುರಿಯನ್ನು ಈಡೇರಿಸಿಕೊಳಲ್ಲು ಸರ್ವ ಪ್ರಯತ್ನವನ್ನು ಪದವಿಯ ಹಂತದಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಮಾಡಲೇ ಬೇಕು ಎಂದು ಪುತ್ತೂರು ಉಪವಿಭಾಗದ ಡಿವೈಎಸ್ಪಿ ಡಾ.ಗಾನ ಪಿ.ಕುಮಾರ್ ಹೇಳಿದರು.ಅವರು ಜು.1ರಂದು ಸವಣೂರು ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರಾಂಶುಪಾಲ ಇಸ್ಮಾಯಿಲ್ ಪಿ. ಮಾತನಾಡಿ, ಶಿಕ್ಷಣ ಎನ್ನುವಂತದ್ದು ಜ್ಞಾನಕ್ಕೆ ಹಾಗೂ ಉದ್ಯೋಗಕ್ಕೆ ಸಂಬಂಧಪಟ್ಟ ವಿಚಾರ. ನಾವು ಪಡೆಯುವಂತಹ ಶಿಕ್ಷಣದಿಂದ ನಾವು ಬದುಕಬೇಕು ಹಾಗೂ ನಮ್ಮವರನ್ನೂ ಬದುಕಿಸಬೇಕು ಎನ್ನುವ ಪರಿಸ್ಥಿತಿ ನಿರ್ಮಾಣವಾಗುವಂತಿರಬೇಕು ಎಂದರು.
ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಉದ್ಘಾಟಿಸಿದ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಕೆ. ಸೀತಾರಾಮ ರೈ ಸವಣೂರು ಅವರು, ನಮ್ಮ ವಿದ್ಯಾಸಂಸ್ಥೆಗೆ ಆಹ್ವಾನಿಸಲ್ಪಡುವ ಎಲ್ಲಾ ಗಣ್ಯ ವ್ಯಕ್ತಿಗಳು ನೀಡುವಂತಹ ಮಾಹಿತಿಯನ್ನು ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಜೀವನದಲ್ಲಿ ಮುಂದೆ ಬರುವಂತೆ ಸಲಹೆಯನ್ನು ನೀಡಿದರು. ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಅಶ್ವಿನ್ ಎಲ್.ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ. ನಾರಾಯಣ ಮೂರ್ತಿ ಕೆ, ಉಪಪ್ರಾಂಶುಪಾಲ ಶೇಷಗಿರಿ ಎಂ ಹಾಗೂ ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲರಾದ ಸೀತಾರಾಮ ಕೇವಳ ಉಪಸ್ಥಿತರಿದ್ದರು. ಸಾಂಸ್ಕೃತಿಕ ಮತ್ತು ಕ್ರೀಡೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಾದ ಗಾಯತ್ರಿ ಮತ್ತು ಅಭೀಜ್ಞಾ ಪ್ರಾರ್ಥಿಸಿದರು. ಬುಶ್ರಾ ಸ್ವಾಗತಿಸಿ, ವರ್ಷಾ ಎಚ್.ಎಲ್ ವಂದಿಸಿದರು. ಶಮೀರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕತಿಕ ಕಾರ್ಯಕ್ರಮ ನಡೆಯಿತು.