ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕ ಸಂಸ್ಥೆಯ ಕಾರ್ಪೊರೇಟ್ ಕಚೇರಿ ಉದ್ಘಾಟನೆ

0

ಪುತ್ತೂರು: ವಿಟ್ಲದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಕಾರ್ಪೊರೇಟ್ ಕಚೇರಿಯು ಪುತ್ತೂರು ಕಲ್ಲಾರೆ ಪವಾಜ್ ಕಾಂಪ್ಲೆಕ್ಸ್‌ನಲ್ಲಿ ಜು. 1ರಂದು ಸಂಜೆ ಉದ್ಘಾಟನೆಗೊಂಡಿತು.


ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ನೂತನ ಶಾಖಾ ಕಚೇರಿಯನ್ನು ತೆಂಗಿನ ಸಸಿಗೆ ನೀರು ಹಾಕಿ ಉದ್ಘಾಟಿಸಿದರು. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.


ದಕ್ಷಿಣ ಕನ್ನಡ ಜಿಲ್ಲೆ ತೆಂಗು ರೈತ ಉತ್ಪಾದಕರ ಕಂಪೆನಿ ನಿಯಮಿತ ಇದರ ಅಧ್ಯಕ್ಷ ಕುಸುಮಾಧರ್ ಎಸ್.ಕೆ, ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ, ಮಾಜಿ ಶಾಸಕ ಸಂಜೀವ ಮಠಂದೂರು, ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ವಿಶ್ವನಾಥ ಗೌಡ, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಪುರುಷೋತ್ತಮ‌ ಮುಂಗ್ಲಿಮನೆ, ರವಿ ಮುಂಗ್ಲಮನೆ, ಅಮರನಾಥ ಗೌಡ, ಡಾ.ರಾಮಚಂದ್ರ ಭಟ್, ಒಕ್ಕಲಿಗ ಸ್ವಸಹಾಯ ಸಂಘದ ಲಿಂಗಪ್ಪ ಗೌಡ, ಸಂಸ್ಥೆಯ ನಿರ್ದೇಶಕರಾದ ವರ್ಧಮಾನ್ ಜೈನ್,ಅರುಣ್ ಕುಮಾರ್ ಪುತ್ತಿಲ, ಗಿರಿಧರ್, ಎನ್, ಲತಾ ಪಿ ಸಹಿತ ಇತರ ನಿರ್ದೇಶಕರು ಉಪಸ್ತಿತರಿದ್ದರು. ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here