ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಂಗವಾಗಿ ಸಮಿತಿಯ ಪದಾಧಿಕಾರಿಗಳ ನೂತನ ಆಯ್ಕೆ ಮತ್ತು ಪೂರ್ವ ಸಿದ್ಧತಾ ಸಭೆಯು ಜು.2 ರಂದು ಆದರ್ಶ ಆಸ್ಪತ್ರೆಯ ವಠಾರದಲ್ಲಿ ನಡೆಯಿತು. ಇತ್ತೀಚೆಗೆ ನಿಧನರಾದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಕ್ರೀಯ ಕಾರ್ಯಕರ್ತರ ದಿ. ರಾಧಾಕೃಷ್ಣ ಭಕ್ತ ಅವರಿಗೆ ಸಭೆಯ ಆರಂಭದಲ್ಲಿ ಅಗಲಿದ ಆತ್ಮಕ್ಕೆ ಚಿರಶಾಂತಿಕೋರಿ ಮೌನ ಪ್ರಾರ್ಥನೆ ಮಾಡಲಾಯಿತು.
ಸಮಿತಿ ಗೌರವ ಅಧ್ಯಕ್ಷರಾಗಿ ಡಾ.ಎಂ ಕೆ ಪ್ರಸಾದ್, ಅಧ್ಯಕ್ಷರಾಗಿ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷರಾಗಿ ರಾಧಾಕೃಷ್ಣ ನಂದಿಲ ಅವರನ್ನು ಆಯ್ಕೆ ಮಾಡಲಾಯಿತು. ಉಳಿದಂತೆ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಕುಂಭ್ಳೆ, ಖಜಾಂಜಿ ಶ್ರೀನಿವಾಸ ಮೂಲ್ಯ, ಜತೆ ಕಾರ್ಯದರ್ಶಿಯಾಗಿ ನೀಲಂತ್, ಉಪಾಧ್ಯಕ್ಷರುಗಳಾಗಿ ಸಹಜ್ ರೈ ಬಳಜ್ಜ, ವಿಶ್ವನಾಥ ಗೌಡ ಬನ್ನೂರು, ರವೀಂದ್ರ ರೈ ನುಳಿಯಾಲು, ಸುಧೀರ್ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಯತೀಶ್ ಆರುವಾರ, ರಮೇಶ್ ಮುಂಡೂರು ಮತ್ತು ಶೇಖರ್ ಬ್ರಹ್ಮನಗರ, ಗೌರವ ಸಲಹೆಗಾರರಾಗಿ ಸಂತೋಷ್ ರೈ ಕೈಕಾರ, ಭಾಮಿ ಜಗದೀಶ್ ಶೆಣೈ, ಚಂದ್ರಶೇಖರ್ ಪರ್ಲಡ್ಕ, ಚಂದ್ರಶೇಖರ ರಾವ್ ಬಪ್ಪಳಿಗೆ, ಮಲ್ಲೇಶ್ ಆಚಾರ್ಯ, ರಾಜೇಶ್ ಬನ್ನೂರು, ಸಾಂಸ್ಕೃತಿಕ ಕಾರ್ಯಕ್ರಮ ಸಮಿತಿಗೆ ಸಂಚಾಲಕರಾಗಿ ಸುರೇಂದ್ರ ಆಚಾರ್ಯ, ಅಜಿತ್ ರೈ ಹೊಸಮನೆ, ಆಹಾರ ಸಮಿತಿ ಸಂಚಾಲಕರಾಗಿ ಕಿರಣ್ ಶಂಕರ್ ಮಲ್ಯ, ಆನಂದ ನೆಕ್ಕರೆ, ಸ್ವಾಗತ ಸಮಿತಿ ಸಂಚಾಲಕರಾಗಿ ಚಂದ್ರಶೇಖರ್ ಎಸ್, ಉದಯ ಹೆಚ್ ಅವರನ್ನು ಆಯ್ಕೆ ಮಾಡಲಾಯಿತು. ಆಯ್ಕೆಗೊಂಡ ನೂತನ ಪದಾಧಿಕಾರಿಗಳನ್ನು ಡಾ.ಎಂ.ಕೆ.ಪ್ರಸಾದ್ ಅವರು ಅಭಿನಂದಿಸಿದರು. ಬಳಿಕ ಪೂರ್ವ ಸಿದ್ದತಾ ಸಭೆ ನಡೆಯಿತು.
ಪೂರ್ವ ಸಿದ್ದತಾ ಸಭೆ:
ನೂತನ ಪದಾಧಿಕಾರಿಗಳ ಆಯ್ಕೆ ಬಳಿಕ ಸೆಪ್ಟೆಂಬರ್ ತಿಂಗಳಲ್ಲಿ ನಡೆಯುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸಭಾ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದ ಕುರಿತು ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು. ದೇಶಪ್ರೇಮಕ್ಕೆ ಸಂಬಂಧಿಸಿ ಉತ್ತಮ ವಾಗ್ಮಿಗಳನ್ನು ಕರೆಸುವ ಕುರಿತು ಸಭೆಯಲ್ಲಿ ಸಲಹೆ ಸೂಚನೆಗಳನ್ನು ಪಡೆಯಲಾಯಿತು.
ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಸಂಬಂಧಿಸಿ ಪ್ರಮುಖವಾದ ನಾಟಕ ಪ್ರದರ್ಶನಕ್ಕೆ ಈಗಾಗಲೇ ಮಾತುಕತೆ ನಡೆಸಲಾಗಿದೆ ಎಂದು ಸಮಿತಿ ಹಿರಿಯ ಪದಾಧಿಕಾರಿಗಳು ತಿಳಿಸಿದರು. ವೇದಿಕೆಯಲ್ಲಿ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್, ನೂತನ ಅಧ್ಯಕ್ಷ ಸುಜೀಂದ್ರ ಪ್ರಭು, ಕಾರ್ಯಾಧ್ಯಕ್ಷ ರಾಧಾಕೃಷ್ಣ ನಂದಿಲ, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ಹೆಚ್, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಖಜಾಂಚಿ ಶ್ರೀನಿವಸ್ ಮೂಲ್ಯ, ಜೊತೆಕಾರ್ಯದರ್ಶಿ ನೀಲಂತ್ ಉಪಸ್ಥಿತರಿದ್ದರು. ಸಭಾ ನಡಾವಳಿಯನ್ನು ಚಂದ್ರಶೇಖರ್ ಹೆಚ್ ಸಭೆಗೆ ಮಂಡಿಸಿದರು. ಸಭೆಯಲ್ಲಿ ನಗರಸಭೆ ಸದಸ್ಯ ಕೆ.ಜೀವಂಧರ್ ಜೈನ್, ಪುಡಾ ನಿಕಟಪೂರ್ವ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಸಹಿತ ನೂರಾರು ಮಂದಿ ಕಾರ್ಯಕರ್ತರು ಉಪಸ್ಥಿತರಿದ್ದರು.