ಲಯನ್ಸ್ ಜಿಲ್ಲಾ ಲಿಯೋ ಅಧ್ಯಕ್ಷೆಯಾಗಿ ರಂಜಿತಾ ಶೆಟ್ಟಿ ಆಯ್ಕೆ

0

ಪುತ್ತೂರು: ದಕ್ಷಿಣ ಕನ್ನಡ, ಕೊಡಗು ಹಾಸನ ಜಿಲ್ಲೆಯನ್ನು ಒಳಗೊಂಡ ಲಯನ್ಸ್ ಜಿಲ್ಲೆ 217ಡಿ ಯ ಜಿಲ್ಲಾ ಲಿಯೋ ಅಧ್ಯಕ್ಷೆಯಾಗಿ ಕಾವು ರಂಜಿತಾ ಶೆಟ್ಟಿ ಆಯ್ಕೆಯಾಗಿದ್ದಾರೆ. ಪುತ್ತೂರು ಸುದಾನ ವಿದ್ಯಾಸಂಸ್ಥೆಯಲ್ಲಿ ಪ್ರೌಢ ಶಿಕ್ಷಣ, ಪುತ್ತೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣ ಪಡೆದು , ಸುಳ್ಯದ ಕೆವಿಜಿ ಡೆಂಟಲ್ ಕಾಲೇಜಿನಲ್ಲಿ ಅಂತಿಮ ವರ್ಷದ ದಂತ ವೈದ್ಯೆಯಾಗಿರುವ ಇವರು ಉತ್ತಮ ಕಾರ್ಯಕ್ರಮ ನಿರೂಪಕಿಯಾಗಿದ್ದಾರೆ. ಪುತ್ತೂರ್‍ದ ಮುತ್ತು ಲಯನ್ಸ್ ಕ್ಲಬ್ ಅಡಿಯಲ್ಲಿ ಪುತ್ತೂರ್‍ದ ಮುತ್ತು ಲಿಯೋ ಕ್ಲಬ್‌ನ ಸ್ಥಾಪಕ ಅಧ್ಯಕ್ಷೆಯಾಗಿದ್ದು ಜಿಲ್ಲಾ ಲಿಯೋ ಜಿಎಸ್‌ಟಿ ಕೋರ್ಡಿನೇಟರ್ ಆಗಿದ್ದಾರೆ. ಇವರು ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಸಾಮಾಜಿಕ ಕ್ಷೇತ್ರದ ಮುಖಂಡ ಕೃಷಿಕ ಕಾವು ಹೇಮನಾಥ ಶೆಟ್ಟಿ ಹಾಗೂ ಅನಿತಾ ಹೇಮನಾಥ ಶೆಟ್ಟಿಯವರ ಪುತ್ರಿಯಾಗಿದ್ದಾರೆ.

LEAVE A REPLY

Please enter your comment!
Please enter your name here