ವಿಟ್ಲ: ಕಂಪೌಂಡ್ ಕುಸಿದು ಬಿದ್ದು ಮನೆಗೆ ಹಾನಿ

0

ವಿಟ್ಲ : ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ವಿಟ್ಲ ಸಮೀಪದ ಚಂದಳಿಕೆ ಎಂಬಲ್ಲಿ ಕಾಂಪೌಂಡ್ ಒಂದು ಮನೆ ಗೋಡೆ ಮೇಲೆ ಕುಸಿದು ಬಿದ್ದು, ಅಪಾರ ನಷ್ಟ ಉಂಟಾದ ಘಟನೆ ನಡೆದಿದೆ.

ಚಂದಳಿಕೆ ನಿವಾಸಿ ಕೃಷ್ಣಪ್ಪ ಮಡಿವಾಳ ರವರ ಮನೆಗೆ ಕಾಂಪೌಂಡ್ ಕುಸಿದು ಬಿದ್ದಿದ್ದು, ಕೂಡಲೇ ಅವರು ವಿಟ್ಲ ಪಟ್ಟಣ ಪಂಚಾಯತ್ ವಿಕೋಪ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ತಿಳಿಸಿದ್ದು, ಪ್ರಾಕೃತಿಕ ವಿಕೋಪ ಸಹಾಯವಾಣಿ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ. ಸ್ಥಳಕ್ಕೆ ವಿಟ್ಲ ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್ ವಿ.ಕೆ. ಹಾಗೂ ಪಟ್ಟಣ ಪಂಚಾಯತ್ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ.

ಸಹಾಯವಾಣಿಗೆ ಕರೆ ಮಾಡಲು ಮನವಿ:
ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಮಳೆಯಿಂದಾಗಿ ಯಾವುದೇ ಅಪಾಯ ಸಂಭವಿಸಿದ ಸಂದರ್ಭದಲ್ಲಿ ಕೂಡಲೇ ವಿಟ್ಲ ಪಟ್ಟಣ ಪಂಚಾಯತ್ ಪ್ರಾಕೃತಿಕ ವಿಕೋಪ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ 08255239220 ಯನ್ನು ಸಂಪರ್ಕಿಸುವಂತೆ ಪಟ್ಟಣ ಪಂಚಾಯತ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here