ಸ್ಥಳಕ್ಕೆ ತೆರಳಿ ಮಳೆ ಹಾನಿ ಪರಿಶೀಲಿಸಿ ತಕ್ಷಣ ಪರಿಹಾರ ಕ್ರಮ: ಸಿ.ಎಂ ಸೂಚನೆ

0

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರ್‍ನಾಲ್ಕು ದಿನಗಳಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು ಮಳೆಯಿಂದ ಹಾನಿಯಾಗಿರುವಲ್ಲಿಗೆ ಕೂಡಲೇ ತೆರಳಿ ಪರಿಶೀಲಿಸಿ ತಕ್ಷಣ ಪರಿಹಾರ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಿಂದ ಹಾನಿ ಸಂಭವಿಸಿದ್ದು, ತಕ್ಷಣ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅವರಿಗೂ ಮುಖ್ಯಮಂತ್ರಿ ತಿಳಿಸಿದ್ದಾರೆ. ಮಳೆ ಹಾನಿ ಕುರಿತಂತೆ ಮುಖ್ಯ ಕಾರ್ಯದರ್ಶಿಯಿಂದ ಮಾಹಿತಿ ಪಡೆದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪರಿಹಾರ ಕಾಮಗಾರಿಗಳಿಗೆ ಅಧಿಕಾರಿಗಳನ್ನು ತುರ್ತಾಗಿ ಸಜ್ಜುಗೊಳಿಸಬೇಕು ಎಂದೂ ಆದೇಶ ನೀಡಿದರು.

LEAVE A REPLY

Please enter your comment!
Please enter your name here