ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು-ಸಂಜೀವ ಮಠಂದೂರು.
ಪುತ್ತೂರು: ಬೂತಿನಲ್ಲಿ ಪಕ್ಷವನ್ನು ಬಲಪಡಿಸುವ ಮೂಲಕ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲು ಸಂಘಟಿತ ಪ್ರಯತ್ನ ಮಾಡಬೇಕು. ಇದರ ಜೊತೆಗೆ ಪಕ್ಷಕ್ಕೆ ಯಾರನ್ನೂ ಸೇರಿಸಿದರು ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ ಹೇಳಿದ್ದಾರೆ.
ಪುಣಚ ಮಹಾಶಕ್ತಿ ಕೇಂದ್ರದ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಕೆಲವು ವ್ಯಕ್ತಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಪುತ್ತೂರು ಬಿಜೆಪಿ ವಿರೋಧ ಇದೆ ಎಂದು ಹರಿದಾಡುತ್ತಿದೆ ಇದು ಸತ್ಯಕ್ಕೆ ದೂರವಾದ ವಿಚಾರ ಪಾರ್ಟಿಯ ಸಿದ್ಧಾಂತದ ಅಡಿಯಲ್ಲಿ ಯಾರು ಬಂದರೂ ಪುತ್ತೂರು ಬಿಜೆಪಿ ಮುಕ್ತವಾಗಿ ಸ್ವಾಗತಿಸುತ್ತದೆ ಮತ್ತು ನಮ್ಮ ತೀರ್ಮಾನವನ್ನು ಈಗಾಗಲೇ ಜಿಲ್ಲೆ ರಾಜ್ಯದ ನಾಯಕರಿಗೆ ,ಹಿರಿಯರಿಗೆ ತಿಳಿಸಿದ್ದೇವೆ ಅವರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಪುತ್ತೂರು ಬಿಜೆಪಿ ಬದ್ಧವಾಗಿರುತ್ತದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಮಂತ್ರಿಗಳ ಸಾಧನೆಯನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕು:
ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಿ 9 ವರ್ಷ ಪೂರೈಸಿದ ಸಾಧನೆಯ ಸಂಭ್ರಮವನ್ನು ಜನರಿಗೆ ತಲುಪಿಸಲು ಕಾರ್ಯಕರ್ತರು ಕೆಲಸ ಮಾಡಬೇಕು. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿಯವರ ಗ್ರಾಮ ಸ್ವರಾಜ್ಯ ಪರಿಕಲ್ಪನೆಯ ವಿವಿಧ ಯೋಜನೆಗಳು ಮತ್ತು ಅಭಿವೃದ್ಧಿಪರ ಸಾಧನೆಗಳನ್ನು ಜನರಿಗೆ ತಿಳಿಸುವ ಕೆಲಸ ಆಗಬೇಕೆಂದರು. ಈ ಸಂದರ್ಭದಲ್ಲಿ ಪುಣಚ ಮಹಾಶಕ್ತೀ ಕೇಂದ್ರ ಅಧ್ಯಕ್ಷರು ಹಾಗೂ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ಪುಣಚ ಮಹಾಶಕ್ತೀ ಕೇಂದ್ರ ಕಾರ್ಯದರ್ಶಿ ದಯಾನಂದ ಶೆಟ್ಟಿ, ಶಕ್ತೀ ಕೇಂದ್ರ ಸಂಚಾಲಕರು, ಮೋರ್ಚಾ ಪ್ರಮುಖರು,ಪ್ರಕೋಷ್ಟ ಸಂಚಾಲಕರು,ಜನಪ್ರತಿನಿಧಿಗಳು, ಮಹಾಶಕ್ತೀ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು.