ಶ್ರೀ ರಾಮಕೃಷ್ಣ ಕ್ರೆಡಿಟ್‌ ಕೋ-ಓಪರೇಟಿವ್ ಸೊಸೈಟಿಯಿಂದ ಕೆ. ಬಿ.ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ

0

ಪುತ್ತೂರು: ಶ್ರೀ ರಾಮಕೃಷ್ಣ ಕ್ರೆಡಿಟ್‌ಕೋ-ಓಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಕೆ. ಜೈರಾಜ್ ಬಿ. ರೈಯವರು ತಿಳಿಸಿದ್ದಾರೆ. ಸಂಘದ ಸದಸ್ಯರ ಮಕ್ಕಳಿಗೆ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ. 90 ಹಾಗೂ ಅದಕ್ಕಿಂತ ಹೆಚ್ಚು ಅಂಕ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಶೇ. 85 ಹಾಗೂ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರತಿಭಾ ಪುರಸ್ಕಾರದ ಅರ್ಜಿಗಳು ಶ್ರೀ ರಾಮಕೃಷ್ಣ ಕ್ರೆಡಿಟ್‌ಕೋ-ಓಪರೇಟಿವ್ ಸೊಸೈಟಿಯ ಎಲ್ಲಾ ಶಾಖೆಗಳಲ್ಲಿ ಮತ್ತು ಸಂಘದ ಅಧಿಕೃತ ವೆಬ್‌ಸೈಟ್ http://ramakrishnacredit.com/ ನಲ್ಲಿ ಲಭ್ಯವಿದ್ದು ಜು. 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಸದಸ್ಯರು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here