ಗ್ರಾ.ಪಂ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ-ನಿಡ್ಪಳ್ಳಿ ಗ್ರಾ.ಪಂ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ನಾಮಪತ್ರ ಸಲ್ಲಿಕೆ

0

ಪುತ್ತೂರು: ಕಳೆದ ವಿಧಾನ ಸಭೆಯಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ಅತ್ಯಧಿಕ ಮತ ಪಡೆದಿರುವ ಪುತ್ತಿಲ ಪರಿವಾರ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಸ್ಪರ್ಧಿಸಲು ಮುಂದಾಗಿದೆ. ಜು.26ರಂದು ನಿಡ್ಪಳ್ಳಿ ಗ್ರಾ.ಪಂಗೆ ನಡೆಯಲಿರುವ ಉಪ ಚುನಾವಣೆಗೆ ಪುತ್ತಿಲ ಪರಿವಾರದಿಂದ ಅಭ್ಯರ್ಥಿಯಾಗಿ ಜಗನ್ನಾಥ್ ರೈ ಕೊಳೆಂಬೆತ್ತಿಮಾರು ನಾಮಪತ್ರ ಸಲ್ಲಿಸಿದ್ದಾರೆ.


ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ, ಪ್ರಧಾನ ಕಾರ್ಯದರ್ಶಿ ಉಮೇಶ್ ಗೌಡ ವೀರಮಂಗಲ, ಪ್ರಮುಖರಾದ ಸುಧೀರ್ ರೈ ನೇಸರ ಕಂಪ, ನಗರ ಅಧ್ಯಕ್ಷ ಅನಿಲ್ ತೆಂಕಿಲ , ಕುಮಾರ್ ನರಸಿಂಹ ಭಟ್, ದೇವಸ್ಯ ಶ್ರೀನಿವಾಸ್ ಭಟ್, ಸುರೇಶ್ , ಸತೀಶ್ ಕೆ, ನಾರಾಯಣ ಪಾಟಾಳಿ ಸಹಿತ ಹಲವು ಮಂದಿ ಕಾರ್ಯಕರ್ತರು ನಾಮಪತ್ರ ಸಲ್ಲಿಸುವ ವೇಳೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here