ವಿಕಲಚೇತನ ಪುನರ್ವಸತಿ ಕಾರ್ಯಕರ್ತರಿಗೆ ಪೋಕ್ಸೋ ಮಾಹಿತಿ ಕಾರ್ಯಗಾರ

0

ಪುತ್ತೂರು: ಪುತ್ತೂರು ಅಸಹಾಯಕರ ಸೇವಾ ಟ್ರಸ್ಟ್,  ಇವರ ವತಿಯಿಂದ ಒಡಿಯೂರು ಗುರುದೇವ ಸೇವಾ ಬಳಗ ಮತ್ತು ಒಡಿಯೂರು ವಜ್ರಮಾತ ಮಹಿಳಾ ಘಟಕ ಪುತ್ತೂರು ಹಾಗೂ ದ. ಕ ಮತ್ತು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರಗಳ ಒಕ್ಕೂಟ, ಕೇಂದ್ರದಿಂದ ಪುತ್ತೂರು ತಾಲೂಕು ಪಂಚಾಯತ್ ಸಾಮರ್ಥ್ಯ ಸೌಧ ಸಭಾಭವನದಲ್ಲಿ ಜು.10 ರಂದು ಪೋಕ್ಸೋ ಕಾಯ್ದೆ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು. 

ವಿಕಲಚೇತನರ ಪುನರ್ವಸತಿ ಕಾರ್ಯಕರ್ತರಿಗೆ ನಡೆದ ಈ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ದಕ್ಷಿಣ ಕನ್ನಡ ಜಿಲ್ಲಾ ಬಾಲನ್ಯಾಯಲಯ ಮಂಡಳಿಯ ಸದಸ್ಯರಾದ ಕಸ್ತೂರಿ ಅವರು ಮಾಹಿತಿ ನೀಡಿದರು. ಪೋಕ್ಸೋ ಕಾಯ್ದೆ ಯ ಉಲ್ಲಂಘನೆ ಪ್ರಕರಣಗಳು ಕಂಡುಬಂದಾಗ ಅನುಸರಿಸಬೇಕಾದ ಕ್ರಮಗಳು ಹಾಗೂ ಸಮಸ್ಯೆಗೆ ಒಳಗಾದ ಮಕ್ಕಳನ್ನು ಕಾಯ್ದೆಯ ಪ್ರಕಾರ ಅವರ ರಕ್ಷಣೆ ಪೋಷಣೆ ಮತ್ತು ಶಿಕ್ಷಣವನ್ನು ಕಾರ್ಯವಿಧಾನ ಮತ್ತು ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ವಿಕಲಚೇತನ ಕಾರ್ಯಕರ್ತರಿಗೆ ಸಮವಸ್ತ್ರವನ್ನು ಕಾರ್ಯಕ್ರಮ ಆಯೋಜಿಸಿದ ಸಂಸ್ಥೆಯ ಸಹಭಾಗಿತ್ವದಲ್ಲಿ ವಿತರಿಸಲಾಯಿತು.ವೇದಿಕೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಾಯಕ ಯೋಜನಾಧಿಕಾರಿ ಭಾರತಿ ಜೆ ಹಾಗೂ ಉದ್ಯೋಗ ಖಾತ್ರಿ ಯೋಜನೆಯ ನಿರ್ದೇಶಕರಾದ  ಶೈಲಜಾ , ಗುರುದೇವ ಸೇವಾ ಬಳಗ ಪುತ್ತೂರು ಇದರ ಅಧ್ಯಕ್ಷ ಸುಧೀರ್ ನೋಂಡಾ  ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಅಸಹಾಯಕ ಸೇವಾ ಟ್ರಸ್ಟಿನ ಅಧ್ಯಕ್ಷೆ ನಯನ ರೈ ಸ್ವಾಗತಿಸಿ, ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಹರಿಣಾಕ್ಷಿ ಜೆ  ಶೆಟ್ಟಿ ವಂದಿಸಿದರು. ಪುತ್ತೂರು ತಾಲೂಕು ಶಿಕ್ಷಣ ಸಂಪನ್ಮೂಲ ಕೇಂದ್ರದ ಜೊತೆ ಕಾರ್ಯದರ್ಶಿ ಸುಮಂಗಲಾ ಶೆಣೈ,  ಸದಸ್ಯರಾದ ಶಾರದಾ ಕೇಶವ,  ಒಡಿಯೂರು ಗುರುದೇವ ಸೇವಾ ಬಳಗದ ಸದಸ್ಯರಾದ ಭವಾನಿ ಶಂಕರ್ ಹಾಗೂ ವಿಶೇಷಚೇತನ ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here