ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಹಾಗೂ ವಿಜ್ಞಾನ(ಸ್ವಾಯತ್ತ) ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಹಾಗೂ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ.ಶ್ರೀಧರ ಎಚ್.ಜಿ ಅವರ ಕೃತಿ ನಾಥಪಂಥ” ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣದಲ್ಲಿ ಜು.13ರಂದು ನಡೆಯಲಿದೆ.
ಕಾಲೇಜಿನ ಕನ್ನಡ ವಿಭಾಗ, ಕನ್ನಡ ಸಂಘ, ವಿವೇಕಾನಂದ ಸಂಶೋಧನಾ ಕೇಂದ್ರ ಹಾಗೂ ಐಕ್ಯೂಎಸಿ ಘಟಕದ ಆಶ್ರಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಪ್ರೊ.ಶ್ರೀಪತಿ ಕಲ್ಲೂರಾಯ ವಹಿಸಲಿರುವರು. ಕೃತಿ ಲೋಕಾರ್ಪಣೆಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ, ಮೈಸೂರಿನ ಮಹಾರಾಣಿ ಕಲಾ ಕಾಲೇಜಿನ ಪ್ರಾಚಾರ್ಯ ಡಾ.ಬಿ.ವಿ ವಸಂತಕುಮಾರ್ ನೆರವೇರಿಸಲಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್ ಭಾಗವಹಿಸಲಿರುವರು ಎಂದು ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ. ಶ್ರೀಧರ ಎಚ್.ಜಿ:
ಡಾ.ಶ್ರೀಧರ ಎಚ್.ಜಿ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮುಂಡಿಗೆಹಳ್ಳದವರಾಗಿದ್ದು, ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಸುಮಾರು 30 ವರ್ಷಗಳಿಂದ ಪ್ರಾಧ್ಯಾಪನ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದು, ಸಾಹಿತ್ಯ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಗೈದಿದ್ದಾರೆ. ಹಲವಾರು ನಾಟಕ, ಕಾದಂಬರಿ, ವಿಮರ್ಶೆ, ಸಂಶೋಧನಾ ಕೃತಿಗಳನ್ನು ರಚಿಸಿರುವ ಇವರಿಗೆ ’ಮಲ್ಲೇಪುರಂ ಪ್ರಶಸ್ತಿ’ ಸಹೃದಯ ಪ್ರಾಧ್ಯಾಪಕ ಪ್ರಶಸ್ತಿ, ”ಪಾಂಡೇಶ್ವರ ಸೂರ್ಯನಾರಾಯಣ ಚಡಗ ಸ್ಮಾರಕ ಕಾದಂಬರಿ ಪ್ರಶಸ್ತಿಯೂ ಲಭಿಸಿದೆ.