ಪುತ್ತೂರು: ಗ್ರಾಮ ವಿಕಾಸ ಸಮಿತಿ ಬೆಟ್ಟಂಪಾಡಿ , ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಮತ್ತು ಶೌರ್ಯ ವಿಪತ್ತು ತಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ, ಬೆಟ್ಟಂಪಾಡಿ ಇವುಗಳ ಸಹಭಾಗಿತ್ವದಲ್ಲಿ ಔಷಧೀಯ ಸಸ್ಯಗಳನ್ನು ವಿತರಿಸುವ ಹಾಗೂ ನೆಡುವ ಕಾರ್ಯಕ್ರಮ ‘ವಿವೇಕ ಸಂಜೀವಿನಿ ‘ ಜುಲೈ 10ರಂದು ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಿತು.ದೀಪ ಮಂತ್ರದೊಂದಿಗೆ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಕಾರ್ಯಕ್ರಮದಲ್ಲಿ ಪ್ರಖ್ಯಾತ ನಾಟಿ ವೈದ್ಯರಾದ ದೇವಿ ಪ್ರಸಾದ್ ಇರ್ದೆ ಬಿಡು ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಬೆಟ್ಟಂಪಾಡಿಯ ಬಿಟ್ಟಂಪಾಡಿ ಬೀಡು ಅನುವಂಶಿಕ ಆಡಳಿತ ಮುಕ್ತೇಸರ ವಿನೋದ್ ಕುಮಾರ್ ಬಳ್ಳಾಲ್ ವಹಿಸಿದ್ದರು.
ಪುತ್ತೂರು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್ ಮತ್ತು ಬೆಟ್ಟಂಪಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ತಂಡದ ಅಧ್ಯಕ್ಷ ಆನಂದ್ ಬೈಲಾಡಿ ,ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಉಪಸ್ಥಿತರಿದ್ದರು.
ನಾಟಿ ವೈದ್ಯರಾದ ದೇವಿ ಪ್ರಸಾದ್ ತಮ್ಮ ಅನುಭವಗಳನ್ನು ಹಂಚಿಕೊಂಡರು.ವಿವೇಕಾನಂದ ಮಾಧ್ಯಮ ಶಾಲೆಯ ಸಹ ಶಿಕ್ಷಕಿ ಯಶೋಧ ಕೆ ಕಾರ್ಯಕ್ರಮ ನಿರೂಪಿಸಿದರು.