ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ. ಬಿಡುಗಡೆ
37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆ ನಿಷ್ಕ್ರಿಯ
ಮಂಗಳೂರು:ರಾಜ್ಯ ಸರಕಾರದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಅನ್ನ ಭಾಗ್ಯ ಯೋಜನೆಯಡಿ 2023ರ ಜುಲೈನಿಂದ ನೇರ ನಗದು ವರ್ಗಾವಣೆಯ ಮೂಲಕ ಅಂತ್ಯೋದಯ (3ಕ್ಕಿಂತ ಹೆಚ್ಚಿನ ಸದಸ್ಯರಿರುವ ಅಂತ್ಯೋದಯ ಪಡಿತರ ಚೀಟಿಗಳು)ಹಾಗೂ ಆದ್ಯತಾ ಪಡಿತರ ಚೀಟಿಯ ಯಜಮಾನನ ಖಾತೆಗೆ ಜಮೆ ಮಾಡಲು ದ.ಕ.ಜಿಲ್ಲೆಯ 2,15,322 ಪಡಿತರ ಚೀಟಿಗಳಿಗೆ 15.02 ಕೋಟಿ ರೂ.ಬಿಡುಗಡೆಯಾಗಿದೆ.
ಹಣ ಜಮೆ ಕುರಿತ ಮಾಹಿತಿಗೆ ಲಿಂಕ್ https://ahara.kar.nic.in/status2/status-of-dbt.aspx ಪರಿಶೀಲಿಸಬಹುದು.
ಜಿಲ್ಲೆಯ 37,801 ಪಡಿತರ ಚೀಟಿಗಳ ಬ್ಯಾಂಕ್ ಖಾತೆಗಳು ನಿಷ್ಕ್ರಿಯಗೊಂಡಿದ್ದು, ಇಂತಹ ಪಡಿತರ ಚೀಟಿದಾರರು ತಮ್ಮ ಬ್ಯಾಂಕ್ ಖಾತೆಯನ್ನು ಜುಲೈ 20ರೊಳಗೆ ಸಕ್ರಿಯಗೊಳಿಸಿದರೆ 2023ರ ಆಗಸ್ಟ್ನಲ್ಲಿ ನಗದು ವರ್ಗಾವಣೆಗೆ ಅರ್ಹರಾಗಿರುತ್ತಾರೆ ಎಂದು ಜಿಲ್ಲಾಽಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.