ಕಡಬ ಯೋಜನಾ ಕಚೇರಿಯಲ್ಲಿ ಸುಜ್ಞಾನನಿಧಿ ಶಿಷ್ಯ ವೇತನ ಮಂಜೂರಾತಿ ಪತ್ರ ವಿತರಣೆ

0

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ಕಡಬ ತಾಲೂಕು ಯೋಜನಾ ಕಛೇರಿಯಲ್ಲಿ ನಡೆದ ಜ್ಞಾನದೀಪ ಶಿಕ್ಷಕರ ನೇಮಕಾತಿ ಹಾಗೂ ಸುಜ್ಞಾನನಿಧಿ ಶಿಷ್ಶವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಜರಗಿತು. ಅಧ್ಯಕ್ಷತೆ ವಹಿಸಿದ್ದ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ನ್ಯಾಯವಾದಿ ಮಹೇಶ್ ಕೆ ಸವಣೂರು ಮಾತನಾಡಿ ಶಿಕ್ಷಕರ ಕೊರತೆ ಇರುವ ಸರಕಾರಿ ಶಾಲೆ ಹಾಗೂ ಅನುದಾನಿತ ಶಾಲೆಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ಶಿಕ್ಷಕರನ್ನು ಒದಗಿಸಿಕೊಡುವ ಪೂಜ್ಯ ಹೆಗ್ಗಡೆಯವರ ಜ್ಞಾನದೀಪ ಕಾರ್ಯಕ್ರಮ ಹಾಗೂ ಸ್ವಸಹಾಯ ಸಂಘದ ಸದಸ್ಯರ ಮಕ್ಕಳ ವೃತ್ತಿಪರ ಶಿಕ್ಷಣಕ್ಕೆ ನೀಡುವ ಸುಜ್ಞಾನನಿಧಿ ಶಿಷ್ಶವೇತನ ಕಾರ್ಯಕ್ರಮ ವು ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಹಾಗೂ ಸ್ವಉದ್ಯೋಗದಲ್ಲಿ ತೊಡಗುವ ಪ್ರತಿಯೊಬ್ಬ ಫಲಾನುಭವಿಗಳಿಗೂ ಆಸರೆಯಾಗಿದೆ ಎಂದರು.


ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ನಾಗರಾಜ್ ಯನ್ ಕೆ ಕಾರ್ಯಕ್ರಮ ಉಧ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನೂಜಿಬಾಳ್ತಿಲ ಕಡಬ ಕ್ಲಷ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಗೊವಿಂದನಾಯ್ಕ ಪೂಜ್ಯರಿಂದ ಮಂಜೂರಾತಿಗೊಂಡಿರುವ ಜ್ಞಾನದೀಪ 12ಶಾಲೆಯ ಶಿಕ್ಷಕರಿಗೆ ಮಂಜೂರಾತಿ ಪತ್ರ ವಿತರಿಸಿದರು.


ಲಯನ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ದಿನೇಶ್ ಆಚಾರ್ಯ 104 ಜನ ವೃತ್ತಿಪರ ಶಿಕ್ಷಣ ನಡೆಸುತ್ತಿರು ವಿದ್ಯಾರ್ಥಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಶುಭ ಹಾರೈಸಿದರು.
ಮುಖ್ಯ ಅತಿಥಿಗಳಾಗಿ ಶಾಂತಿನಗರ ಶಾಲಾ ಮುಖ್ಯೋಪಾಧ್ಯಾಯ ಪ್ರದೀಪ್ ಬಾಕಿಲ, ತಾಲೂಕು ಜನಜಾಗೃತಿ ವೇದಿಕೆ ಸದಸ್ಯ ಹಾಗೂ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ಯನ್ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಕಛೇರಿ ಸಹಾಯಕಿ ಯಶಸ್ವಿನಿ ಪ್ರಾರ್ಥಿಸಿದರು ಕಡಬ ವಲಯ ಮೇಲ್ವೀಚಾರಕ ರವಿಪ್ರಸಾದ್ ಆಲಾಜೆ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.. ತಾಲೂಕು ಕಛೇರಿ ಆಡಳಿತ ಪ್ರಬಂಧಕಿ ಮೊಹಿನಿ ಹಾಗೂ ಕಛೇರಿ ಸಿಬ್ಬಂದಿಗಳು ಮತ್ತು ಆಯ್ದ ಜ್ಞಾನಧೀಪ ಶಿಕ್ಷರುಗಳು ಸುಜ್ಞಾನನಿಧಿ ಶಿಷ್ಯವೇತನ ಪಡೆಯಲಿರುವ ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here