ಸವಣೂರು: ಸವಣೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಪುತ್ತೂರು ವತಿಯಿಂದ ಬಿಸಿಯೂಟದ ಬಟ್ಟಲು ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ನ ಅಧ್ಯಕ್ಷ ಜೈರಾಜ್ ಭಂಡಾರಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೃಷ್ಣಕುಮಾರ್ ರೈ ದೇವಶ್ಯ, ಕಾರ್ಯದರ್ಶಿ ಸುಜಿತ್ ಡಿ ರೈ ಆಗಮಿಸಿದರು. ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ರಫೀಕ್ ಎಂ. ಎ. ಪ್ರಭಾರ ಮುಖ್ಯಗುರುಗಳಾದ ಮಮತಾ ಎನ್. ಶಾಲಾಭಿವೃದ್ದಿ ಸಮಿತಿ ಉಪಾಧ್ಯಕ್ಷೆ ದಿವ್ಯಲತಾ,ಶಾಲಾಭಿವೃದ್ಧಿ ಸಮಿತಿ ಸದಸ್ಯರು ಅಂಗನವಾಡಿ ಕಾರ್ಯಕರ್ತೆ ಸ್ಫೂರ್ತಿ, ವಿದ್ಯಾರ್ಥಿವೃಂದ ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು.
ರೋಟರಿ ಕ್ಲಬ್ ಅಧ್ಯಕ್ಷ ಜೈರಾಜ್ ಭಂಡಾರಿ ಮಾತನಾಡಿ ನಮ್ಮ ರೋಟರಿ ಸಂಸ್ಥೆಯು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಸಮಾಜದ ಅಭಿವೃದ್ಧಿಯನ್ನು ಮಾಡಬೇಕೆಂಬು ಉದ್ದೇಶದಿಂದ ಬೆಳೆದು ಬಂದಂತ ಸಂಸ್ಥೆಯಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರಿ ಶಾಲೆಯ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಸರಕಾರ ಆಯೋಜನೆ ಮಾಡಿರುವ ಮಧ್ಯಾಹ್ನದ ಬಿಸಿ ಊಟಕ್ಕೆ ಬಟ್ಟಲುಗಳ ಸಮಸ್ಯೆ ಇರುವ ಉದ್ದೇಶಕ್ಕೆ ವಿದ್ಯಾರ್ಥಿಗಳಿಗೆ ಈ ರೀತಿಯ ಒಂದು ಉತ್ತಮ ಸೌಲಭ್ಯವನ್ನು ಕಲ್ಪಿಸಬೇಕು ಅನ್ನುವ ನಿಟ್ಟಿನಲ್ಲಿ ಈ ಒಂದು ಕಾರ್ಯಕ್ರಮವನ್ನು ಶಾಲೆಯಲ್ಲಿ ಹಮ್ಮಿಕೊಂಡಿದ್ದು ಬಹಳ ಸಂತೋಷವನ್ನು ವ್ಯಕ್ತಪಡಿಸುತ್ತೇವೆ. ಇನ್ನು ಮುಂದೆಯೂ ಕೂಡ ಈ ಶಾಲೆಯ ಹೆಸರು ಸರ್ವತೋಮುಖ ಅಭಿವೃದ್ಧಿಯ ಜೊತೆ ರೋಟರಿ ಸಂಸ್ಥೆ ಸದಾ ಬೆಂಬಲವಾಗಿರುತ್ತದೆ ಎಂದರು.
ಶಾಲಾ ವಿದ್ಯಾರ್ಥಿನಿಯರ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಶಿಕ್ಷಕರಾದ ಕವಿತಾ ಸ್ವಾಗತಿಸಿ ,ಪ್ರಭಾರ ಮುಖ್ಯಶಿಕ್ಷಕಿ ಮಮತಾ ವಂದಿಸಿದರು.ದಯಾಮಣಿ ಕಾರ್ಯಕ್ರಮ ನಿರೂಪಿಸಿದರು.