ಪುತ್ತೂರು:ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮೀನಾ ಕಾಲೇಜಿನ ಎಂ. ಎಸ್. ಡಬ್ಲ್ಯೂ ವಿಭಾಗ ಮತ್ತು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆ ಸವಣೂರು ಇದರ ಆಶ್ರಯದಲ್ಲಿ ಹೆಣ್ಣುಮಕ್ಕಳಿಗೆ ಹದಿಹರೆಯದ ಸವಾಲುಗಳು ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ಜು.15 ರಂದು ದ. ಕ. ಜಿ. ಪಂ. ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಶಾಲೆಯ ಮುಖ್ಯ್ಯೊಪಾಧ್ಯಯ ಲಿಂಗಾರಾಜು ಇವರು ಆರೋಗ್ಯ ಇಲಾಖೆಯಿಂದ ಎಲ್ಲಾ ರೀತಿಯ ಸವಲತ್ತುಗಳನ್ನು ಶಾಲೆಗೆ ಒದಗಿಸಿಕೊಡಬೇಕಾಗಿ ವಿನಂತಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸವಣೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ರಾಜೀವಿ. ವಿ. ಶೆಟ್ಟಿ, ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿ, ಕಾರ್ಯಕ್ರಮಕ್ಕೆ ಶುಭ ಕೋರಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸದ್ದ ಸವಣೂರು ಪ್ರಾಥಮಿಕ ಆರೋಗ್ಯ ಕೇಂದ್ರ ಡಾ.ಮಧುಶ್ರೀ ಋತುಚಕ್ರದ ಬಗ್ಗೆ ಸವಿವಿವರವಾಗಿ ಮಾಹಿತಿಯನ್ನು ನೀಡಿ, ಋತುಚಕ್ರ ಎಂದರೇನು? ಆ ಸಮಯದಲ್ಲಿ ಆಗುವ ಕೆಲವು ಬದಲಾವಣೆಗಳು ಹಾಗೂ ಯಾವ ರೀತಿಯಲ್ಲಿ ಜಾಗರೂಕತೆ ವಹಿಸಬೇಕು ಎಂದು ಹೇಳಿದರಲ್ಲದೇ, ಋತುಚಕ್ರದ ಬಗ್ಗೆ ಹೆಣ್ಣುಮಕ್ಕಳಲ್ಲಿ ಇರುವ ಕೆಲವು ಗೊಂದಲವನ್ನು ನಿವಾರಿಸಿದರು.
ಸವಣೂರು ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕರಾದ ಬಾಲಕೃಷ್ಣ. ಕೆ ಹಾಗೂ ಹಿರಿಯ ಶಿಕ್ಷಕಿಯಾದ ತುಳಸಿ ಉಪಸ್ಥಿತರಿದ್ದರು. ಸ್ನಾತಕೋತ್ತರ ಸಮಾಜ ಕಾರ್ಯವಿಭಾಗದ ವಿದ್ಯಾರ್ಥಿನಿ ಲತಾಮಣಿ ಯಂ ಸ್ವಾಗತಿಸಿ, ಪ್ರೀತಿಕಾ ಜೋಸೆಫ್ ವಂದಿಸಿ, ವಿದ್ಯಾರ್ಥಿನಿ ಗಾಯನ ಕಾರ್ಯಕ್ರಮವನ್ನು ನಿರೂಪಿಸಿದರು. ವಿದ್ಯಾರ್ಥಿ ಕೌಶಿಕ್ ಸಹಕರಿಸಿದರು.