ಪುತ್ತೂರು: ವಿದ್ಯಾಭಾರತಿ ಕರ್ನಾಟಕ ವತಿಯಿಂದ ಪ್ರಾಥಮಿಕ, ಪೌಢಶಾಲೆ, ಪದವಿಪೂರ್ವ ಕಾಲೇಜು ಶಿಕ್ಷಕರ ಜಿಲ್ಲಾ ಶೈಕ್ಷಣಿಕ ಸಹಮಿಲನ ಕಾರ್ಯಕ್ರಮ ಜುಲೈ 22ರಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಕೇಶವ ಸಂಕಲ್ಪ ಸಭಾಭವನದಲ್ಲಿ ನಡೆಯಲಿದೆ.
ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಹಾಗೂ ಮುಳಿಯ ಜುವೆಲ್ಲರ್ಸ್ ಮತ್ತು ಸಮೂಹ ಸಂಸ್ಥೆಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಾಂತ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಭಾರತೀಯ ಜ್ಞಾನ ಪರಂಪರೆ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ.ಸಮರೋಪ ಸಮಾರಂಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಡಾ. ಕೆ.ಎಂ. ಕೃಷ್ಣ ಭಟ್ ಭಾಗವಹಿಸಲಿದ್ದಾರೆ. ವಿದ್ಯಾಭಾರತಿ ಕ್ಷೇತ್ರಿಯ ಸಹ ಸಂಘಟನಾ ಕಾರ್ಯದರ್ಶಿ ಜಿ. ಆರ್. ಜಗದೀಶ್ ಸಮಾರೋಪ ಭಾಷಣ ಮಾಡಲಿದ್ದಾರೆ.