ನೆಲ್ಯಾಡಿ: ಆನಂದಾಶ್ರಮ ಸೇವಾ ಟ್ರಸ್ಟ್ ಪುತ್ತೂರು, ಕೌಕ್ರಾಡಿ ಗ್ರಾಮ ಪಂಚಾಯತ್, ಲಯನ್ಸ್ ಕ್ಲಬ್ ದುರ್ಗಾಂಬಾ ಆಲಂಕಾರು, ಜೇಸಿಐ ನೆಲ್ಯಾಡಿ ಇದರ ಆಶ್ರಯದಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು, ಪ್ರಾಥಮಿಕ ಆರೋಗ್ಯ ಕೇಂದ್ರ ನೆಲ್ಯಾಡಿ, ಸಂಚಾರಿ ನೇತ್ರ ಚಿಕಿತ್ಸಾ ಘಟಕ ಮಂಗಳೂರು ಇದರ ಸಹಯೋಗದೊಂದಿಗೆ ತಜ್ಞ ವೈದ್ಯರಿಂದ ಉಚಿತ ನೇತ್ರ ಚಿಕಿತ್ಸಾ ಶಿಬಿರ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ, ಉಚಿತ ಕನ್ನಡ ವಿತರಣೆ ಕಾರ್ಯಕ್ರಮ ಜು.21ರಂದು ಬೆಳಿಗ್ಗೆ 9.30ರಿಂದ ಮಧ್ಯಾಹ್ನ 1ರ ತನಕ ಇಚ್ಲಂಪಾಡಿ ಗ್ರಾಮದ ನೇರ್ಲ ಸರಕಾರಿ ಉ.ಹಿ.ಪ್ರಾ.ಶಾಲೆಯಲ್ಲಿ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.